ಕರ್ನಾಟಕ ಲೋಕಾಯುಕ್ತರಾಗಿ ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ಬಿ.ಎಸ್​.ಪಾಟೀಲ್​ ನೇಮಕ

JusBSPatil
Published on

ಬೆಂಗಳೂರು: ಕರ್ನಾಟಕದ ಲೋಕಾಯುಕ್ತರಾಗಿ ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.

ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರ ನಂತರ ತೆರವಾಗಿರುವ ಸ್ಥಾನಕ್ಕೆ ನ್ಯಾಯಮೂರ್ತಿ ಬಿ.ಎಸ್​.ಪಾಟೀಲ್​ ಅವರನ್ನು ನೇಮಕ ಮಾಡಲಾಗಿದೆ. ಇವರು ಇಲ್ಲಿಯವರೆಗೆ ಉಪ ಲೋಕಾಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದರು.

ನ್ಯಾ.ಬಿ.ಎಸ್‌.ಪಾಟೀಲ್‌ 14 ವರ್ಷಗಳ ಕಾಲ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದಾರೆ. ಅದಕ್ಕೂ ಮುನ್ನ ಅವರು 20 ವರ್ಷಗಳ ಕಾಲ ವಕೀಲರಾಗಿದ್ದರು. 2019ರ ನವೆಂಬರ್​ನಲ್ಲಿ ಇವರನ್ನು ಉಪ ಲೋಕಾಯುಕ್ತರನ್ನಾಗಿ ನೇಮಕ ಮಾಡಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net