More

    ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ ಎಂಬ ಪ್ರಶ್ನೆಗೆ ಮುಖ್ಯಮಂತ್ರಿ ಬೊಮ್ಮಾಯಿ ಪ್ರತಿಕ್ರಿಯೆ ಹೀಗಿತ್ತು…

    ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಸಂಘಟನಾತ್ಮಕವಾಗಿ ಬದಲಾವಣೆ ಗೊತ್ತಿಲ್ಲ. ಪಕ್ಷದ ಹಾಲಿ ರಾಜ್ಯಾಧ್ಯಕ್ಷರನ್ನು ಮುಂದುವರಿಸಬೇಕೆ, ಬೇಡವೆ ಎಂಬ ಬಗ್ಗೆ ಯಾವುದೇ ಚರ್ಚೆಯೂ ಆಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ನುಣುಚಿಕೊಂಡರು.

    ಸಿಎಂ ಅಧಿಕೃತ ನಿವಾಸ ರೇಸ್ ವ್ಯೂ ಕಾಟೇಜ್ ಬಳಿ ಸುದ್ದಿಗಾರರಿಗೆ ಭಾನುವಾರ ಪ್ರತಿಕ್ರಿಯಿಸಿದ ಅವರು, ರಾಜ್ಯ ಬಿಜೆಪಿ ಹಾಲಿ ಅಧ್ಯಕ್ಷರು‌ ಮೂರು ವರ್ಷಗಳನ್ನು ಪೂರೈಸಿದ್ದಾರೆ. ಇಡೀ ರಾಜ್ಯ ಹಲವು ಬಾರಿ ಸುತ್ತಾಡಿ‌ ಬೂತ್ ಮಟ್ಟದಿಂದ ಪಕ್ಷದ ಸಂಘಟನೆಗೆ ಶ್ರಮ, ಗ್ರಾಮ ಪಂಚಾಯಿತಿ ಸೇರಿ ಹಲವು ಚುನಾವಣೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ ಎಂದರು. ಹಾಲಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಅವಧಿ ಆಗಸ್ಟ್ ತಿಂಗಳಲ್ಲಿ ಮುಕ್ತಾಯಗೊಳ್ಳಲಿದೆ. ಈ ನಿಟ್ಟಿನಲ್ಲಿ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಶೀಘ್ರ ನಡೆಯಲಿದೆ ಎಂಬ ಸುದ್ದಿಗೆ ಸಂಬಂಧಿಸಿದಂತೆ ಈ ಪ್ರಶ್ನೆ ಕೇಳಲಾಗಿತ್ತು.

    ಪರಿಸ್ಥಿತಿ ಅವಲೋಕನ
    ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿರುವ ಮಾಹಿತಿ ಲಭ್ಯವಾಗಿದೆ. ಸಂಬಂಧಿಸಿದ ಜಿಲ್ಲಾಧಿಕಾರಿಗಳ ಜತೆಗೆ ಇಂದು ಸಂಜೆ ವಿಡಿಯೋ ಸಂವಾದ ನಡೆಸಿ ಪರಿಸ್ಥಿತಿ ಅವಲೋಕಿಸುವೆ. ನಷ್ಟದ ಪ್ರಮಾಣ, ಪರಿಹಾರಕ್ಕೆ ಕೈಗೊಂಡ ಕ್ರಮಗಳನ್ನು ಪರಿಶೀಲಿಸಿ ಸೂಕ್ತ ನಿರ್ದೇಶನ ನೀಡುವೆ ಎಂದು ಸಿಎಂ ಬೊಮ್ಮಾಯಿ‌ ತಿಳಿಸಿದರು.

    ಸೂಕ್ತ ನಿರ್ಧಾರ
    ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಸಂಬಂಧ ಹಿರಿಯ ಅಧಿಕಾರಿಗಳ ಜತೆಗೆ ಕಂದಾಯ ಸಚಿವರು ಈಗಾಗಲೇ ಸಭೆ ನಡೆಸಿದ್ದಾರೆ. ಆದಷ್ಟು ಬೇಗ ಸೂಕ್ತ ತೀರ್ಮಾನವಾಗಲಿದೆ ಎಂದು ಸಿಎಂ ಬೊಮ್ಮಾಯಿ‌ ಹೇಳಿದರು.

    ಗೌರಿ-ಗಣೇಶನ ಹಬ್ಬಕ್ಕೆ ಕೆಎಸ್​ಆರ್​ಟಿಸಿಯಿಂದ ಡಿಸ್ಕೌಂಟ್​: ಹೆಚ್ಚುವರಿ ಬಸ್​ ಜತೆಗೆ ಟಿಕೆಟ್​ನಲ್ಲಿ ರಿಯಾಯಿತಿ

    ರಾಹುಲ್​ನಂಥ ನಾಯಕನಿಂದ ಪಕ್ಷಕ್ಕೆ ಅವನತಿಯೇ ಗತಿ ಎಂದು ಬೇಸರಿಸುತ್ತಲೇ ಕಾಂಗ್ರೆಸ್​ಗೆ ಮಾಜಿ ಸಂಸದ ಗುಡ್​ಬೈ

    ಅವಳಿ ಕಟ್ಟಡ ನೆಲಸಮಗೊಳಿಸ್ತಿರೋ ಬ್ಲಾಸ್ಟರ್​ ಚೇತನ್​ರ ಕನಸಿಂದು ನನಸಾಗ್ತಿದೆ! ಅವರ ಮಾತಲ್ಲೇ ಕೇಳಿ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts