VIDEO: ಕಾರವಾರದಲ್ಲಿ ಧಗಧಗನೆ ಹೊತ್ತಿ ಉರಿದ ಬೋಟ್‌: ಅರಬ್ಬಿ ಸಮುದ್ರದಲ್ಲಿ ದುರಂತ

boat
Published on

ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ಬೋಟಿಗೆ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ.

ಅರಬ್ಬಿ ಸಮುದ್ರದಲ್ಲಿ ಈ ಘಟನೆ‌ ನಡೆದಿದ್ದು, ಸದ್ಯ ಯಾವುದೇ ಪ್ರಾಣಾಪಾಯವಾಗಲಿಲ್ಲ. ಬೋಟಿನಲ್ಲಿದ್ದ ಏಳು ಮೀ‌ನುಗಾರರ ರಕ್ಷಣೆ ಮಾಡಲಾಗಿದೆ.

ವರದ ವಿನಾಯಕ ಹೆಸರಿನ ಮೀನುಗಾರಿಕೆ ಬೋಟ್ ಇದಾಗಿದ್ದು, ಬೋಟಿನ ಎಂಜಿನ್‌ನಲ್ಲಿ ಆಗಿರುವ ಅನಾಹುತ ಇದಾಗಿದೆ. ಬ್ಯಾಟರಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಉಂಟಾಗಿರುವ ಸಾಧ್ಯತೆ ಎಂದು ಹೇಳಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net