More

    ಕೆಫೆ ಕಾಫಿ ಡೇ ಕೇಸ್‌: ಬಂಧನದ ಭೀತಿಯಲ್ಲಿ ಮಾಜಿ ಸಿಎಂ ಪುತ್ರಿ!

    ಚಿಕ್ಕಮಗಳೂರು: ಕಳೆದ ವರ್ಷ ನಿಗೂಢವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದ ಜಗತ್ಪ್ರಸಿದ್ಧ ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಹೆಗ್ಡೆ ಅವರ ಪತ್ನಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಮಾಳವಿಕಾ ಸಿದ್ಧಾರ್ಥ್‌ ಅವರಿಗೀಗ ಬಾರಿ ಸಂಕಷ್ಟ ಎದುರಾಗಿದೆ.

    ಚೆಕ್‌ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರ ವಿರುದ್ಧ ಕೇಸ್‌ ದಾಖಲಾಗಿದ್ದು, ಸ್ಥಳೀಯ ಕೋರ್ಟ್‌ ಇವರಿಗೆ ವಾರೆಂಟ್‌ ಜಾರಿಗೆ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಸಿದ್ಧಾರ್ಥ್‌ ಅವರ ಪತ್ನಿ ಮಾಳವಿಕಾ ಅವರಿಗೆ ಸದ್ಯ ಬಂಧನದ ಭೀತಿ ಎದುರಾಗಿದೆ.

    ಕೆಫೆ ಕಾಫಿ ಡೇ ಕೇಸ್‌: ಬಂಧನದ ಭೀತಿಯಲ್ಲಿ ಮಾಜಿ ಸಿಎಂ ಪುತ್ರಿ!ಚೆಕ್‌ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಳವಿಕಾ ಸಿದ್ಧಾರ್ಥ್ ಸೇರಿದಂತೆ ಎಂಟು ಜನರ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ. ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಕಾಫಿ ಬೆಳೆಗಾರ ನಂದೀಶ್ ಕೆ. ಎಂಬುವವರು ದಾಖಲಿಸಿರುವ ಚೆಕ್‌ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯ ಜೆಎಂಎಫ್‌ಸಿ ಕೋರ್ಟ್ ಈ ಆದೇಶ ಹೊರಡಿಸಿದೆ.

    ಇದನ್ನೂ ಓದಿ: ಚುನಾವಣೆಯಲ್ಲಿ ಜಯಭೇರಿ, ಆದರೆ ಸಂತಸಪಡಲು ಅಭ್ಯರ್ಥಿಯೇ ಇಲ್ಲ!

    ಸಿದ್ಧಾರ್ಥ್ ಒಡೆತನದ ಎಬಿಸಿ ಸಂಸ್ಥೆಗೆ ಕಾಫಿ ಬೆಳೆಯನ್ನು ನೀಡಿದ್ದ ಸುಮಾರು 300ಕ್ಕೂ ಹೆಚ್ಚು ಬೆಳೆಗಾರರಿಗೆ ಸಂಸ್ಥೆಯು ಹಣವನ್ನು ಪಾವತಿಸಿರಲಿಲ್ಲ. 100 ಕೋಟಿಗೂ ಅಧಿಕ ಹಣವನ್ನು ಬೆಳಗೆಗಾರರಿಗೆ ನೀಡದೇ ಬಾಕಿ ಉಳಿಸಿಕೊಳ್ಳಲಾಗಿತ್ತು.

    ಈ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ. ಸಿದ್ಧಾರ್ಥ್‌ ಅವರು 2019ರ ಜುಲೈ ತಿಂಗಳಿನಲ್ಲಿ ನಿಗೂಢವಾಗಿ ಮೃತಪಟ್ಟಿದ್ದಾರೆ. ಇದೊಂದು ಆತ್ಮಹತ್ಯೆ ಎನ್ನಲಾಗುತ್ತಿದ್ದರೂ, ಈ ಬಗ್ಗೆ ಇದುವರೆಗೆ ಹಲವಾರು ಊಹಾಪೋಹಗಳು ಎದ್ದಿದ್ದು, ಸತ್ಯಾಸತ್ಯತೆ ಹೊರಬರಬೇಕಷ್ಟೇ.

    ಅಮೆರಿಕ ಚುನಾವಣೆಯಲ್ಲಿ ಗೆದ್ದ ನಾಲ್ವರು ಭಾರತೀಯರು!

    ಜೂಜಾಟಕ್ಕೆ ಪ್ರೇರಣೆ: ಹೈಕೋರ್ಟ್‌ ನೋಟಿಸ್‌ ಕುಣಿಕೆಯಲ್ಲಿ ಸಿನಿ, ಕ್ರಿಕೆಟ್‌ ತಾರೆಯರು

    ಚುನಾವಣೆಯಲ್ಲಿ ಗೆಲ್ಲುವುದು ನಾನೇ: ಇಲ್ಲದಿದ್ದರೆ ಸುಪ್ರೀಂಕೋರ್ಟ್‌ಗೆ ಹೋಗುವೆ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts