

ಕೀವ್: ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧ ಪ್ರಾರಂಭವಾಗಿ ಏಳುತಿಂಗಳುಗಳೇ ಕಳೆದಿವೆ. ಕಳೆದ ಫೆಬ್ರುವರಿಯಿಂದ ಶುರುವಾದ ಯುದ್ಧ ಇನ್ನೂ ನಿಂತಿಲ್ಲ. ಯುದ್ಧದಲ್ಲಿ ಯೂಕ್ರೇನ್ಗೆ ಅಪಾರ ಪ್ರಮಾಣದ ಹಾನಿ ಅನುಭವಿಸಿದ್ದರೂ ಅಧ್ಯಕ್ಷ ವೊಲೊದಿಮಿರ್ ಝೆಲೆನ್ಸ್ಕಿ ಮಾತ್ರ ಧೈರ್ಯದಿಂದ ಮುನ್ನುಗ್ಗುತ್ತಲೇ ಇದ್ದಾರೆ.
ಆದರೆ ಇದರ ನಡುವೆಯೇ ಯೂಕ್ರೇನ್ ಅಧ್ಯಕ್ಷ ವೊಲೊದಿಮಿರ್ ಝೆಲೆನ್ಸ್ಕಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಇಂದು ನಡೆದಿದೆ.
ವೊಲೊದಿಮಿರ್ ಝೆಲೆನ್ಸ್ಕಿ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅದೃಷ್ಟವಶಾತ್ ವೊಲೊದಿಮಿರ್ ಅಲ್ಪದಲ್ಲಿಯೇ ಪಾರಾಗಿದ್ದಾರೆ. ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.
ಯುದ್ಧಭೂಮಿಗೆ ಭೇಟಿ ನೀಡಿದ ನಂತರ ಹಿಂದಿರುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ವೊಲೊಡಿಮಿರ್ ಅವರ ಕಾರು ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದೆ, ಆದರೆ ಜೀವಕ್ಕೇನು ಅಪಾಯವಿಲ್ಲ ಎಂದು ಅವರ ವಕ್ತಾರರು ತಿಳಿಸಿದ್ದಾರೆ. ಇವರ ಕಾರು ಚಾಲಕನಿಗೆ ಸಹ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ಕೂಲಂಕಷವಾಗಿ ತನಿಖೆ ಪ್ರಾರಂಭಿಸಲಾಗಿದೆ. (ಏಜೆನ್ಸೀಸ್)