VIDEO|ಕಚೇರಿಯಲ್ಲಿಯೇ ಕುಷ್ಟಗಿ ತಹಶೀಲ್ದಾರ್‌ ರಾಸಲೀಲೆ- ಕಿಸ್ಸಿಂಗ್‌ ವಿಡಿಯೋ ವೈರಲ್​

Tahashildar
Published on

ಕೊಪ್ಪಳ: ಕೊಪ್ಪಳ ನಗರಾಭಿವೃದ್ಧಿ ಕೋಶ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಗುರುಬಸವರಾಜ್‌ ಎರಡು ತಿಂಗಳ ಹಿಂದೆ ಕುಷ್ಟಗಿ ತಹಶೀಲ್ದಾರರಾಗಿದ್ದ ವೇಳೆ ಕಚೇರಿಯಲ್ಲಿ ನಡೆಸಿದ್ದ ರಾಸಲೀಲೆ ಪ್ರಕರಣ ಇದೀಗ ಬೆಳಕಿಗೆ ಬಂದಿದೆ.

ತಮ್ಮ ಕಚೇರಿಯ ಮಹಿಳಾ ಸಿಬ್ಬಂದಿಗೆ ಕಚೇರಿಯ ಒಳಗೇ ಮುತ್ತುಕೊಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅದೀಗ ವೈರಲ್‌ ಆಗಿದೆ.

ಘಟನೆ ನಡೆದು ಎರಡು ತಿಂಗಳ ನಂತರ ಈ ವಿಷಯ ಬೆಳಕಿಗೆ ಬಂದಿದೆ. ಗುರುಬಸವರಾಜ್ ಕುಷ್ಟಗಿ ತಹಶೀಲ್ದಾರ್ ಆಗಿದ್ದ ಅವಧಿಯಲ್ಲಿ ಈ ಘಟನೆ ನಡೆದಿದ್ದು, ಅಲ್ಲಿಂದ ವರ್ಗಾವಣೆಯಾಗಿ ಈಗ ಅವರು ಕೊಪ್ಪಳ ನಗರಾಭಿವೃದ್ಧಿ ಕೋಶದಲ್ಲಿ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಇವರ ವಿರುದ್ಧ ಇದೀಗ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಉನ್ನತ ಸ್ಥಾನದಲ್ಲಿರುವ ಅಧಿಕಾರಿಯೇ ತಮ್ಮ ಕಚೇರಿಯಲ್ಲಿ ಈ ರೀತಿ ಮಾಡಿ ಹುದ್ದೆಯ ಘನತೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿರುವ ಸಾರ್ವಜನಿಕರು, ಇವರ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net