

ಮೂಡುಬಿದಿರೆ: ಕನ್ನಡ ಸಾರಸ್ವತ ಲೋಕದಲ್ಲಿ ಅತ್ಯಂತ ಹೆಚ್ಚು ರಾಯಧನ(ರಾಯಲ್ಟಿ) ಪಡೆಯುತ್ತಿದ್ದವರು ಎಸ್.ಎಲ್.ಭೈರಪ್ಪನವರು. ಸಾಹಿತ್ಯದಿಂದ ಪಡೆದ ಹಣವನ್ನು ಸಂಪೂರ್ಣವಾಗಿ ಸಮಾಜಕ್ಕೆ ಹಿಂದಿರುಗಿಸಿದ ಕೀರ್ತಿ ಭೈರಪ್ಪನವರಿಗೆ ಸಲ್ಲುತ್ತದೆ ಎಂದು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ.ಅಜಕ್ಕಳ ಗಿರೀಶ್ ಭಟ್ ಹೇಳಿದರು.
ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕನ್ನಡ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮೂಡುಬಿದಿರೆ ಘಟಕದ ಸಹಯೋಗದಲ್ಲಿ ಕಾಲೇಜಿನ ಸೆಮಿನಾರ್ ಸಭಾಂಗಣದಲ್ಲಿ ನಡೆದ ನುಡಿನಮನ ಕಾರ‌್ಯಕ್ರಮದಲ್ಲಿ ಡಾ.ಎಸ್.ಎಲ್.ಭೈರಪ್ಪ ಅವರ ವ್ಯಕ್ತಿತ್ವ ಮತ್ತು ಬರಹಗಳಲ್ಲಿನ ಜೀವನ ಮೌಲ್ಯಗಳ ಕುರಿತು ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲೂಕು ಘಟಕ ಅಧ್ಯಕ್ಷ ವೇಣುಗೋಪಾಲ್ ಶೆಟ್ಟಿ ಕೆ., ಕಾಲೇಜು ಪ್ರಾಂಶುಪಾಲ ಡಾ.ಪೀಟರ್ ಫರ್ನಾಂಡಿಸ್, ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಜೀವನ್ ರಾಮ್ ಸುಳ್ಯ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಶ್ರೀಲಕ್ಷ್ಮೀ ಕಾರ‌್ಯಕ್ರಮ ನಿರೂಪಿಸಿದರು. ಪ್ರನುಷ ವಂದಿಸಿದರು.