ರಾಮನ ಹಣಕ್ಕೆ ಕನ್ನ ಹಾಕಿದ ಖದೀಮರು: ಲಕ್ಷಾಂತರ ರೂಪಾಯಿ ವಿತ್​ಡ್ರಾ!

ramjanmabhoomi
Published on

ಅಯೋಧ್ಯೆ: ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಖಾತೆಗೆ ಕನ್ನ ಹಾಕಿರುವ ಕಳ್ಳರು ಲಕ್ಷಾಂತರ ರೂಪಾಯಿಗಳನ್ನು ವಿತ್​ಡ್ರಾ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ನಕಲಿ ಚೆಕ್​ಗಳನ್ನು ಬಳಸಿ ಈ ಹಣವನ್ನು ವಿತ್​ಡ್ರಾ ಮಾಡಿಕೊಳ್ಳಲಾಗಿದೆ.

ಲಖನೌದ ಬ್ಯಾಂಕ್​ನಲ್ಲಿ ಇರುವ ಖಾತೆಗಳಿಂದ ಹಣವನ್ನು ಲಪಟಾಯಿಸಲಾಗಿದೆ. ಎರಡು ಖಾತೆಗಳಿಂದ ಈ ಹಣವನ್ನು ವಿತ್​ಡ್ರಾ ಮಾಡಲಾಗಿದೆ. ಎರಡು ಬಾರಿ ಮೊದಲು ವಿತ್​ಡ್ರಾ ಮಾಡಲಾಗಿದೆ. ಮೂರನೆ ಬಾರಿ ಹಣ ವಿತ್​ಡ್ರಾ ಮಾಡಲು ಪ್ರಯತ್ನಿಸಿದಾಗ, ಬ್ಯಾಂಕ್​ನವರಿಗೆ ಸಂದೇಹ ಬಂದಿದೆ. ಅವರು ಕೂಡಲೇ ಟ್ರಸ್ಟ್​ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ. ಆಗಲೇ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.

ಮೊದಲು ಹಣವನ್ನು ಸೆಪ್ಟೆಂಬರ್ 1ರಂದು ವಿತ್​ಡ್ರಾ ಮಾಡಿಕೊಳ್ಳಲಾಗಿದೆ. ನಂತರ 3ನೇ ತಾರೀಖು ಮತ್ತೆ ಹಣವನ್ನು ವಿತ್​ಡ್ರಾ ಮಾಡಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮೂರನೇ ಬಾರಿಗೆ ಲಖನೌದ ಬ್ಯಾಂಕ್ ಆಫ್ ಬರೋಡಾದಲ್ಲಿ 9.86 ಲಕ್ಷ ಚೆಕ್ ವಿತ್ ಡ್ರಾ ಮಾಡುವ ಸಂದರ್ಭದಲ್ಲಿ ಚಂಪತ್ ರಾಯ್ ಅವರಿಗೆ ಕರೆ ಹೋಗಿದೆ.

ಸದ್ಯ ಅಪರಿಚಿತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದಾರೆ. ಇದಾಗಲೇ ನಕಲಿ ಚೆಕ್​ ಬಳಸಿ ಸುಮಾರು 6 ಲಕ್ಷ ರೂಪಾಯಿಗಳನ್ನು ವಿತ್ ಡ್ರಾ ಮಾಡಿಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದ್ದು, ನಿಖರ ಮಾಹಿತಿ ಬರಬೇಕಿದೆಯಷ್ಟೇ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net