ಭಟ್ಕಳದಲ್ಲಿ ಮನೆಯ ಮೇಲೆ ಗುಡ್ಡ ಕುಸಿತ: ಅವಶೇಷಗಳಡಿ ಕುಟುಂಬಸ್ಥರು- ಮೃತಪಟ್ಟಿರುವ ಶಂಕೆ

bhatkal
Published on

ಭಟ್ಕಳ (ಉತ್ತರಕನ್ನಡ) : ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ತೀವ್ರ ಮಳೆಗೆ ಮಣ್ಕುಳಿ, ಚೌಥನಿ, ಮುಂಡಳ್ಳಿ, ಮುಟ್ಟಳ್ಳಿ, ಮೂಢ ಭಟ್ಕಳ ಬೈಪಾಸ್​ ಸೇರಿದಂತೆ ಅನೇಕ ಗ್ರಾಮಗಳು ಮಳೆಗೆ ಮುಳುಗಡೆಯಾಗಿದೆ. ಮುಟ್ಟಳ್ಳಿಯಲ್ಲಿ ಗುಡ್ಡ ಕುಸಿದು ಮನೆಯೊಳಗೆ ನಾಲ್ವರು ಸಿಲುಕಿದ್ದಾರೆ.

ಮುಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೇರಿಪಾಲ್ ನಾರಾಯಣ ಎಂಬ ಮನೆಯ ಮೇಲೆ ಗುಡ್ಡ ಕುಸಿದ ಪರಿಣಾಮ ಮನೆ ಸಂಪೂರ್ಣ ನೆಲಸಮವಾಗಿದ್ದು ಮನೆಯಲ್ಲಿದ್ದ ನಾಲ್ವರು ಸಾವನ್ನಪ್ಪಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಗೌರಮ್ಮಜ್ಜಿ ಮನೆಯ ಲಕ್ಷ್ಮೀ ನಾಯ್ಕ (48), ಆಕೆಯ ಪುತ್ರಿ ಲಕ್ಷ್ಮೀ ನಾಯ್ಕ (33), ಪುತ್ರ ಅನಂತ ನಾಯ್ಕ (32) ಹಾಗೂ ಸಹೋದರಿಯ ಮಗ ಪ್ರವೀಣ್ ನಾಯ್ಕ (20) ಅವಶೇಷಗಳ ಅಡಿ ಸಿಲುಕಿದ್ದಾರೆ. ಸಿಲುಕಿರುವವರು. ಪ್ರವೀಣ್ ನಿನ್ನೆ ರಾತ್ರಿಯಷ್ಟೆ ಮನೆಗೆ ಬಂದು, ಮಳೆಯ ಕಾರಣ ಉಳಿದುಕೊಂಡಿದ್ದರು.

ಸದ್ಯ ಗುಡ್ಡ ತೆರವು ಕಾರ್ಯಾಚರಣೆ ಮುಂದುವರಿದಿದೆ. ಜಲಾವೃತಗೊಂಡಿರುವ ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸುವ ಕಾರ್ಯವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಮಾಡುತ್ತಿದ್ದಾರೆ. ಮಣ್ಕುಳಿಯಿಂದ ಮೂಢ ಭಟ್ಕಳ ಬೈಪಾಸಿನ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಕಡಿತಗೊಂಡಿದೆ. ಸ್ಥಳಕ್ಕೆ ಎನ್​​​​ಡಿಆರ್​ಎಫ್ ತಂಡ ಆಗಮಿಸಿದ್ದು ರಕ್ಷಣಾಕಾರ್ಯ ಮುಂದುವರೆದಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net