ನಿಜವಾಗ್ಲೂ ಲಾಕ್‌ಡೌನ್ ಆಗತ್ತಾ? ಕರ್ಫ್ಯೂ ಮುಂದುವರಿಯತ್ತಾ? ಸಿಎಂ ಏನು ಹೇಳಿದ್ರು ನೋಡಿ...

Lockdown
Published on

ಬೆಂಗಳೂರು: ರಾಜ್ಯದಲ್ಲಿ ಕರೊನಾ ನಿಯಂತ್ರಣಕ್ಕೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು. ಲಾಕ್ ಡೌನ್ ಜಾರಿ ಮಾಡದೆ ಬಿಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ವಿಧಾನಸೌಧ ಮುಂಭಾಗ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಇದೇ 18ರಂದು ಪ್ರತಿಪಕ್ಷ ನಾಯಕರ ಸಭೆ ಕರೆಯಲಾಗಿದೆ. ‌ಸರ್ವಪಕ್ಷ ನಾಯಕರ ಸಭೆಯಲ್ಲಿ ಸಮಗ್ರ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ರಾಜ್ಯದ 8 ಜಿಲ್ಲೆಗಳಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಅಗತ್ಯಬಿದ್ದರೆ ಒಂದೆರಡು ಜಿಲ್ಲೆಗಳಿಗೆ ನೈಟ್ ಕರ್ಪ್ಯೂ ವಿಸ್ತರಿಸುವ ಕುರಿತು ಚಿಂತನೆ ನಡೆಸಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net