More

    ಈಶ್ವರಪ್ಪ ನೇತೃತ್ವದಲ್ಲಿ ಸಿಎಂ ಬಳಿ ಬಂದ ಮಠಾಧೀಶರು: ಮಠಗಳಿಗೂ ಬಜೆಟ್‌ನಲ್ಲಿ ಸೌಲಭ್ಯ ನೀಡುವುದಾಗಿ ಭರವಸೆ

    ಬೆಂಗಳೂರು: ಬೆಂಗಳೂರಿನಲ್ಲಿ ಮಠಗಳ ಕಾರ್ಯಚಟುವಟಿಕೆಗಳಿಗೆ ಸ್ಥಳ ನೀಡಲಾಗುವುದು. ಸದ್ಯ ಕಾನೂನು ತೊಡಕಿನ ಕಾರಣ ಸ್ಥಳ ಸಿಕ್ಕಿಲ್ಲ. ಆದಷ್ಟು ಬೇಗ ಸಮಸ್ಯೆ ಬಗೆಹರಿಸಿ ಸ್ಥಳ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

    ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ಮಠಾಧೀಶರ ಮನವಿ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

    ಈ ಹಿಂದೆಯೇ ಹಿಂದುಳಿದ, ದಲಿತ ವರ್ಗಗಳ ಸ್ವಾಮೀಜಿಗಳ ಒಕ್ಕೂಟ ನಮ್ಮನ್ನು ಭೇಟಿ ಮಾಡಿದೆ. ಹಿಂದುಳಿದ, ದಲಿತ ವರ್ಗಗಳ ಏಳಿಗೆಗಾಗಿ ಬಜೆಟ್‌ನಲ್ಲಿ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಮನವಿ ಮಾಡಿದ್ದಾರೆ. ಯುವಕರಿಗೆ ಹೆಚ್ಚಿನ ಅವಕಾಶ ಕೊಡಬೇಕು ಎಂದು ಹೇಳಿದ್ದಾರೆ. ಸಮುದಾಯದ ಆಶೋತ್ತರಗಳಿಗೆ ಸ್ಪಂದಿಸಬೇಕೆಂದು ಹೇಳಿದ್ದಾರೆ. ತಮ್ಮ ಮಠಗಳ ಕಾರ್ಯಗಳ ಕಾರ್ಯದ ಬಗ್ಗೆಯೂ ಸ್ವಾಮೀಜಿಗಳು ತಿಳಿಸಿದ್ದಾರೆ. ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತೇನೆ ಎಂದು ಮುಖ್ಯಮಂತ್ರಿ ತಿಳಿಸಿದರು.

    ಬಜೆಟ್‌ನಲ್ಲಿ ಏನು ಮಾಡುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ. ಈಗಲೇ ಅದನ್ನು ಹೇಳಲಾಗದು. ಸರ್ಕಾರದ ಕಾರ್ಯಕ್ರಮಗಳ ಜತೆ ಜತೆಗೆ ಮಠಗಳಿಗೂ ಸೌಲಭ್ಯ ಕಲ್ಪಿಸಲಾಗುವುದು. ಹಿಂದುಳಿದ ವರ್ಗಗಳ ಮೀಸಲಾತಿ ಹೆಚ್ಚಳ ವಿಚಾರ ಈಗ ಏನೂ ಚರ್ಚೆ ಆಗಿಲ್ಲ. ಹಿಂದುಳಿದ ಮತ್ತು ದಲಿತ ಮಠಗಳ ಶಿಕ್ಷಣ ಸಂಸ್ಥೆಗಳಿಗೆ ತಲಾ 5 ಎಕರೆ ಜಮೀನು ಹಾಗೂ 5 ಕೋಟಿ ರೂ‌. ಅನುದಾನ ನೀಡಬೇಕು ಎಂದು ಒತ್ತಾಯಿಸಿದ್ದು, ಆ ಬಗ್ಗೆಯೂ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

    ಡಿಕೆಶಿ ನಿವಾಸಕ್ಕೆ ಬಂದ ಸಚಿವ ಆನಂದ್‌ ಸಿಂಗ್‌! ಏನಿದರ ಗುಟ್ಟು? ರಾಜಕೀಯದಲ್ಲಿ ಕುತೂಹಲ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts