ಬಿಜೆಪಿ ಕಾರ್ಯಕರ್ತನ ಕಪಾಳಕ್ಕೆ ಹೊಡೆದು ವಿವಾದ ಮೈಮೇಲೆ ಎಳೆದುಕೊಂಡ ಕೇಂದ್ರ ಸಚಿವ

ಕೋಲ್ಕತ: ಪಶ್ಚಿಮ ಬಂಗಾಳದಲ್ಲಿ ಇನ್ನೇನು ಚುನಾವಣೆ ಸನ್ನಿಹಿತವಾಗುತ್ತಿದೆ. ಎಲ್ಲಾ ರಾಜಕೀಯ ಪಕ್ಷಗಳು ಬಿರುಸಿನಿಂದ ಮತಯಾಚನೆಯಲ್ಲಿ ತೊಡಗಿವೆ. ಈ ನಡುವೆಯೇ ನಡೆದ ಹೋಲಿ ದಿನದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಬಾಬುಲ್‌ ಸುಪ್ರಿಯೋ ಒಂದು ಎಡವಟ್ಟು ಮಾಡಿಕೊಂಡಿದ್ದು, ಅದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್‌ ಆಗುತ್ತಿದೆ. ಅಷ್ಟಕ್ಕೂ ಅವರು ಮಾಡಿರುವುದು ಏನೆಂದರೆ ಕಾರ್ಯಕ್ರಮವೊಂದರಲ್ಲಿ ವ್ಯಕ್ತಿಯೊಬ್ಬರ ಕಪಾಳಕ್ಕೆ ಹೊಡೆದಿದ್ದಾರೆ. ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಬಾಬುಲ್ ಸುಪ್ರಿಯೊ ತಮ್ಮದೇ ಪಕ್ಷದ ವ್ಯಕ್ತಿಯೊಬ್ಬರಿಗೆ ಈ ಸಂದರ್ಭದಲ್ಲಿ ಈ ರೀತಿ ಮಾಡಿದ್ದಾರೆ ಎನ್ನುವ … Continue reading ಬಿಜೆಪಿ ಕಾರ್ಯಕರ್ತನ ಕಪಾಳಕ್ಕೆ ಹೊಡೆದು ವಿವಾದ ಮೈಮೇಲೆ ಎಳೆದುಕೊಂಡ ಕೇಂದ್ರ ಸಚಿವ