

ಬೆಳಗಾವಿ: ಯುದ್ಧ ಪೀಡಿತ ಯೂಕ್ರೇನ್ ದೇಶದಲ್ಲಿರುವ ಕರ್ಮಾಟಕದ ಅಧಿಕಾರಿಗಳ ರಕ್ಷಣೆಗಾಗಿ ಇಬ್ಬರು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅಲ್ಲದೆ, ಅಲ್ಲಿರುವ ನಮ್ಮ ವಿದ್ಯಾರ್ಥಿಗಳನ್ನು ಕರೆತರಲು ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ವಿದ್ಯಾರ್ಥಿಗಳನ್ನು ಪತ್ತೆ ಕರೆತರಲಾಗುತ್ತಿದೆ. ಆಯಾ ಜಿಲ್ಲಾಧಿಕಾರಿ ಗಳ ಮೂಲಕ ಊಕ್ರೇನ್ ಗೆ ಹೋಗಿರುವವರ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದರು.
ಬೆಳಗಾವಿ ಜಿಲ್ಲೆಯ 12 ವಿದ್ಯಾರ್ಥಿಗಳ ಪೈಕಿ ಒಬ್ಬರು ಬಂದಿದ್ದಾರೆ. ಸ್ಮಾರ್ಟ್ ಸಿಟಿ ಎಂ.ಡಿ. ಪ್ರವೀಣ್ ಬಾಗೇವಾಡಿ ಹಾಗೂ ಎಸಿ ರವೀಂದ್ರ ಕರಲಿಂಗಣ್ಣವರ ಈಗಾಗಲೇ ಮುಂಬೈಗೆ ಕಳುಗಿಸಲಾಗಿದೆ. ಪೋಷಕರು ಆತಂಕ ಪಡುವ ಅಗತ್ಯ ಇಲ್ಲ ಎಂದು ಅವರು ಹೇಳಿದರು.