VIDEO: ನಾಡಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿ ಆಯುಧ ಪೂಜೆ ಮಾಡಿದ ಶಾಸಕ!

gun
Published on

ರಾಯಚೂರು: ಇಂದು ಎಲ್ಲೆಡೆ ಸಂಭ್ರಮದಿಂದ ಆಯುಧ ಪೂಜೆಯನ್ನು ನಡೆಸಲಾಗುತ್ತಿದೆ. ಆಯುಧ ಹಾಗೂ ವಾಹನಗಳಿಗೆ ಜನರು ಪೂಜೆ ಸಲ್ಲಿಸುತ್ತಿದ್ದಾರೆ.

ಆದರೆ ಆಯುಧ ಪೂಜೆಯ ಜವಾಬ್ದಾರಿ ಮರೆತು ನಾಡಬಂದೂಕಿನಿಂದ ಗುಂಡು ಹಾರಿಸಿ ವಿವಾದಕ್ಕೀಡಾಗಿದ್ದಾರೆ ಶಾಸಕ ಶಿವನಗೌಡ ನಾಯಕ.

ರಾಯಚೂರು ಜಿಲ್ಲೆಯ ದೇವದುರ್ಗ ಶಾಸಕ ಶಿವನಗೌಡ ನಾಯಕ ಅವರು 2-3 ಬಾರಿ ಗುಂಡು ಹಾರಿಸಿದ್ದಾರೆ. ಸ್ವಗ್ರಾಮ ಅರಕೇರಾದ ಮನೆಯಲ್ಲಿ ಆಕಾಶದೆತ್ತರಕ್ಕೆ ಗುಂಡು ಹಾರಿಸಿ, ಆಯುಧ ಪೂಜೆ ಆಚರಿಸಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. (ದಿಗ್ವಿಜಯ ನ್ಯೂಸ್​)

ಇಲ್ಲಿದೆ ನೋಡಿ ವಿಡಿಯೋ:

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net