More

    ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ, ಕನ್ನಡಿಗ ಮೋಹನ ಶಾಂತನಗೌಡರ್‌ ಇನ್ನಿಲ್ಲ…

    ನವದೆಹಲಿ: ಸುಪ್ರೀಂಕೋರ್ಟ್ ಹಾಲಿ ನ್ಯಾಯಮೂರ್ತಿ, ಕನ್ನಡಿಗ ಮೋಹನ್ ಶಾಂತನಗೌಡರ್ (63) ಶನಿವಾರ ತಡರಾತ್ರಿ ನಿಧನರಾಗಿದ್ದಾರೆ. ಕೆಲ ಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಇವರು, ದೆಹಲಿಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಇವರು ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ಹೇಳಿವೆ. ಇವರ ಸೇವಾವಧಿ 2023ರ ಮೇ 5ರವರೆಗೆ ಇತ್ತು.

    ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಚಿಕ್ಕೇರೂರಿನವರಾದ ನ್ಯಾಯಮೂರ್ತಿ ಶಾಂತನಗೌಡರ್‌ ಇವರು 1980ರಲ್ಲಿ ವಕೀಲಿ ವೃತ್ತಿ ಆರಂಭಿಸಿದ್ದರು. 2003ರಲ್ಲಿ ಕರ್ನಾಟಕ ಹೈಕೋರ್ಟ್ ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕವಾಗಿದ್ದರು. 2004ರಿಂದ ಕಾಯಂ ನ್ಯಾಯಮೂರ್ತಿಯಾಗಿ ಸೇವೆ ಆರಂಭಿಸಿದ್ದರು.

    ಇವರು 1958ರ ಮೇ 5ರಂದು ಜನಿಸಿದ್ದರು. ಧಾರವಾಡದಲ್ಲಿ ಶಿಕ್ಷಣ ಪಡೆದಿದ್ದ ಇವರು, 1980 ರಲ್ಲಿ ವಕೀಲಿ ವೃತ್ತಿ ಆರಂಭಿಸಿದ್ದರು. 1991 ರಿಂದ 1993 ರವರೆಗೆ ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಉಪಾಧ್ಯಕ್ಷರಾಗಿ ಮತ್ತು 1995 ಮತ್ತು 1996 ರ ಅವಧಿಯಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. 1999 ರಿಂದ 2002 ರವರೆಗೆ ಕರ್ನಾಟಕ ರಾಜ್ಯದ ರಾಜ್ಯ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಆಗಿಯೂ ಸೇವೆ ಸಲ್ಲಿಸಿದ್ದಾರೆ.

    ಕರ್ನಾಟಕ ಹೈಕೋರ್ಟ್‌ನಿಂದ ಕೇರಳ ಹೈಕೋರ್ಟ್‌ಗೆ ವರ್ಗಾವರಣೆಯಾಗಿದ್ದ ಇವರು, 2016ರಲ್ಲಿ ಕೇರಳ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಂಡರು. 2017ರ ಫೆಬ್ರವರಿ 17ರಂದು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾಗಿ ನೇಮಕ ಗೊಂಡಿದ್ದರು.

    ವಿದ್ವತ್ತು, ಕಲೆ, ವಿವೇಕ ಮೇಳವಿಸಿದ್ದ ವ್ಯಕ್ತಿತ್ವ ಮಹಾಬಲೇಶ್ವರ ಅಣ್ಣಪ್ಪ ಹೆಗಡೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts