ಬೆಳಗಾವಿ: ವಾಯವ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಪ್ರಕಾಶ ಹುಕ್ಕೇರಿ ಅವರು ಮತದಾರರಿಗೆ ಕ್ಷೇತ್ರದಾದ್ಯಂತ ಹಣ ಹಂಚುವ ಮೂಲಕ ಮತದಾರರಿಗೆ ಆಮೀಷ ಒಡ್ಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಅಭಯ ಪಾಟೀಲ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಇಂದು ಕೇವಲ ವಿಜಯಪುರ ನಗರದಲ್ಲಿ ಸುಮಾರು 17.40 ಲಕ್ಷ ರೂ ಹಣದ ಜೊತೆ ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಅಭ್ಯರ್ಥಿ ಕರಪತ್ರಗಳು ಸಿಕ್ಕಿವೆ. ಇನ್ನೂ ಗ್ರಾಮೀಣ ಪ್ರದೇಶಗಳಲ್ಲಿ ಹಾಗೂ ತಾಲೂಕು ಮಟ್ಟದಲ್ಲಿ ಯಾವ ರೀತಿ ಕಾಂಗ್ರೆಸ್ ಪಕ್ಷ ಹಣ ಹಂಚಿಕೆ ನಡೆಯುತ್ತಿದೆ ಎಂಬುದು ಊಹೆ ಮಾಡಲಾಗದು. ಈ ಬಗ್ಗೆ ಚುನಾವಣಾ ಅಧಿಕಾರಿಗಳು ಹಾಗೂ ಚುನಾವಣಾ ಆಯೋಗ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಇದು ನಮ್ಮ ಪ್ರಜಾಪ್ರಭುತ್ವಕ್ಕೆ ಅತ್ಯಂತ ಮಾರಕವಾಗಿದೆ ಎಂದಿದ್ದಾರೆ.
ಕಾಂಗ್ರೆಸ್ ನಾಯಕರಿಗೆ ಸೇರಿದ “ರವದಿ ಫಾರ್ಮ್ ಹೌಸ್” ನಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಹಣ ಹಂಚಲು ಸೇರಿದಂತೆ ಅನೇಕ ಅಕ್ರಮ ನಡೆಸುತ್ತಿರುವ ಮಾಹಿತಿಯಿದೆ. ಈ ಬಗ್ಗೆ ಚುನಾವಣಾ ಆಯೋಗ ಕೂಡಲೇ ಕ್ರಮ ಜರುಗಿಸಬೇಕು. ಶಿಕ್ಷಕರ ಕ್ಷೇತ್ರ ಅತ್ಯಂತ ಪವಿತ್ರವಾದದ್ದು, ಕಾಂಗ್ರೆಸ್ ಪಕ್ಷವು ಅಕ್ರಮವಾಗಿ, ಆಸೆ-ಆಮೀಷಗಳ ಮೂಲತ ಗೆಲ್ಲಲು ಹವಣಿಸುತ್ತಿರುವುದು ಖಂಡನೀಯ ಎಂದು ಹೇಳಿಕೆ ನೀಡಿದ್ದಾರೆ.
ಪ್ರಕಾಶ ಹುಕ್ಕೇರಿ ಅವರ ಮೇಲೆ “ಪ್ರಜಾಪ್ರತಿನಿಧಿ ಕಾಯ್ದೆ” ಅಡಿಯಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಹಾಗೂ ಈ ಪರಿಷತ್ ಚುನಾವಣೆಯಿಂದ ಅವರನ್ನು ವಜಾಗೊಳಿಸಬೇಕೆಂದು ಎಂದು ಅಭಯ ಅವರು ಒತ್ತಾಯಿಸಿದ್ದಾರೆ.
ಬೆಂಗಳೂರಿನ ಹೋಟೆಲ್ನಲ್ಲಿ ಡ್ರಗ್ಸ್ ನಶೆಯಲ್ಲಿ ಸಿಕ್ಕಿಬಿದ್ದು ಅರೆಸ್ಟ್ ಆದ ಖ್ಯಾತ ನಟ ಇವರೇ ನೋಡಿ…
ಬೆಂಗಳೂರಿನಲ್ಲಿ ಸರಣಿ ಅಪಘಾತ: ಕ್ಯಾಂಟರ್, ಟೆಂಪೊ, ಬಿಎಂಟಿಸಿ ಬಸ್, ಆಟೋ ಡಿಕ್ಕಿ