ಚುನಾವಣೆಯಲ್ಲಿ ಹಣ ಹಂಚಿಕೆ: ಸಂಸದೆಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್‌

election
Published on

ತೆಲಂಗಾಣ: 2019 ರ ಸಾರ್ವತ್ರಿಕ ಚುನಾವಣೆಯ ವೇಳೆ ಮತದಾರರಿಗೆ ಹಣ ಹಂಚಿಕೆ ಮಾಡಿರುವ ಆರೋಪ ಹೊತ್ತಿದ್ದ ತೆಲಂಗಾಣ ರಾಷ್ಟ್ರ ಸಮಿತಿಯ (ಟಿಆರ್​ಎಸ್​) ಸಂಸದೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜೈಲು ಶಿಕ್ಷೆ ವಿಧಿಸಿದೆ.

ಮೆಹಬೂಬಾಬಾದ್ ಟಿಆರ್​ಎಸ್​ ಸಂಸದೆ ಮಲೋತ್ ಕವಿತಾ ಮತ್ತು ಅವರ ಸಹವರ್ತಿಗಳಿಗೆ ಹೈದರಾಬಾದ್​ನ ನಾಂಪಲ್ಲಿಯ ಕೋರ್ಟ್‌ 6 ತಿಂಗಳ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿದೆ.

2019ರ ಸಾರ್ವತ್ರಿಕ ಚುನಾವಣೆ ವೇಳೆ ಸಂಸದರ ಸಹಾಯಕ ಶೌಕತ್ ಅಲಿ ಬುರ್ಗಂಪಹಾಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕವಿತಾ ಪರ ಮತ ಚಲಾಯಿಸುವಂತೆ ಮತದಾರರಿಗೆ 500 ರೂಪಾಯಿ ಹಣ ಹಂಚಿಕೆ ಮಾಡಿದ್ದರು. ಇವರು ಕಂದಾಯ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದರು. ಇವರ ವಿರುದ್ಧ ದೂರು ದಾಖಲಾಗಿ ಪ್ರಕರಣ ಕೋರ್ಟ್‌ ಮೆಟ್ಟಿಲೇರಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net