ನಮಗೆಲ್ಲಾ ಸಾಯಲು ಅವಕಾಶ ಕೊಡಿ ಎಂದ ಮುಸ್ಲಿಮರು: ದಯಾಮರಣಕ್ಕೆ ಕೋರಿ ಹೈಕೋರ್ಟ್‌ಗೆ ಅರ್ಜಿ

muslims
Published on

ಅಹಮದಾಬಾದ್ (ಗುಜರಾತ್): ನಾವೆಲ್ಲಾ ಸಾಯಬೇಕು, ನಮಗೆ ದಯಾಮರಣ ಕೊಡಿ... ಹೀಗೆಂದು 100 ಮುಸ್ಲಿಂ ಕುಟುಂಬಗಳು ಅಹಮದಾಬಾದ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಮೀನುಗಾರಿಕೆಯಲ್ಲಿ ತೊಡಗಿರುವ ಈ ಕುಟುಂಬಗಳು ತಾವು ಸಾಯುವ ನಿರ್ಧಾರಕ್ಕೆ ಬಂದಿರುವುದಾಗಿ ಹೇಳಿಕೊಂಡಿವೆ. 2016 ರಿಂದ ಪೋರಬಂದರ್‌ನ ಗೋಸಾಬರ ಬಂದರಿನಲ್ಲಿ ದೋಣಿ ನಿಲುಗಡೆಯನ್ನು ಸರ್ಕಾರ ನಿಷೇಧಿಸಿದೆ. ಈ ನಿಷೇಧದಿಂದ ತೊಂದರೆಗೀಡಾಗಿರುವ ಹಿನ್ನೆಲೆಯಲ್ಲಿ ತಾವು ಸಾಯಬೇಕಿದೆ ಎಂದು ಅವರು ಹೇಳಿದ್ದಾರೆ.

ಮೀನುಗಾರಿಕೆ ಮತ್ತು ಬೋಟಿಂಗ್ ಪರವಾನಗಿ ಇದ್ದರೂ ತಮ್ಮ ಹಕ್ಕುಗಳನ್ನು ನಿರಾಕರಿಸಲಾಗುತ್ತಿದೆ ಎನ್ನುವುದು ಈ ಕುಟುಂಬಗಳ ಆರೋಪ. ಇದಕ್ಕೆ ಸಂಬಂಧಿಸಿದಂತೆ ಇದಾಗಲೇ ರಾಜ್ಯಪಾಲರು, ಮುಖ್ಯಮಂತ್ರಿಗಳು, ಪೋರಬಂದರ್ ಜಿಲ್ಲಾಧಿಕಾರಿಗೆ ಮನವಿ ಮಾಡಿಕೊಂಡರೂ ಪ್ರಯೋಜನ ಆಗಿಲ್ಲ ಎನ್ನುವುದು ಇವರ ಆರೋಪ. ಸದ್ಯ ಹೈಕೋರ್ಟ್‌ಗೆ ರಜೆ ಇದ್ದು, ರಜಾ ದಿನಗಳು ಮುಗಿದ ನಂತರ ಈ ಅರ್ಜಿಯ ವಿಚಾರಣೆ ನಡೆಯಲಿದೆ ಎಂದು ತಿಳಿದುಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net