ಕರೊನಾದಿಂದ ನಳೀನ್​ಕುಮಾರ್​ ಗುಣಮುಖ: ದೇವರನ್ನು ಕಂಡೆ ಎಂದು ಭಾವುಕ ಟ್ವೀಟ್​

naleenkumar
Published on

ಬೆಂಗಳೂರು: ನಾನು ಭಗವಂತನನ್ನು ಕಣ್ಣಾರೆ ನೋಡಿದವನಲ್ಲ. ಆದರೆ ತಮ್ಮ ಅಮೂಲ್ಯ ಪ್ರಾಣವನ್ನು ಪಣಕ್ಕಿಟ್ಟು ನಮ್ಮ ಆರೋಗ್ಯಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ವೈದ್ಯರಲ್ಲಿ, ದಾದಿಯರಲ್ಲಿ, ಆರೋಗ್ಯ ಸಿಬ್ಬಂದಿಯಲ್ಲಿ ದೇವರನ್ನು ಕಂಡೆ...

ಹೀಗೆಂದು ಭಾವುಕರಾಗಿ ಟ್ವೀಟ್​ ಮಾಡಿರುವುದು ಬಿಜೆಪಿ ರಾಜ್ಯಾದ್ಯಕ್ಷ, ಹಾಗೂ ದಕ್ಷಿಣ ಕನ್ನಡ ಸಂಸದ ನಳೀನ್​ಕುಮಾರ್​ ಕಟೀಲ್​.

ಕರೊನಾ ಸೋಂಕಿಗೆ ಒಳಗಾಗಿ ಕಳೆದ ಆಗಸ್ಟ್​ 30ರಂದು ಆಸ್ಪತ್ರೆಗೆ ದಾಖಲಾಗಿದ್ದ ಕಟೀಲ್​ ಅವರು, ತಮ್ಮ ಸೇವೆ ಮಾಡಿರುವ ವೈದ್ಯರು, ದಾದಿಯರು ಹಾಗೂ ಆರೋಗ್ಯ ಸಿಬ್ಬಂದಿಯ ಪರಿಶ್ರಮವನ್ನು ಶ್ಲಾಘಿಸಿದ್ದಾರೆ.

ಕಟೀಲು ದುರ್ಗಾಪರಮೇಶ್ವರಿ ದೇವಿಯ ಕೃಪೆ, ನಿಮ್ಮೆಲ್ಲರ ಪ್ರೀತಿ, ಹಾರೈಕೆಯ ಫಲವಾಗಿ ಕರೊನಾ ಕಾಯಿಲೆಯಿಂದ ಗುಣಮುಖನಾಗಿದ್ದೇನೆ. ಸದ್ಯ ಕೆಲವು ದಿನಗಳ ತನಕ ಕ್ವಾರಂಟೈನ್‍ನಲ್ಲಿ ಇರಲು ವೈದ್ಯರು ಸಲಹೆ ನೀಡಿದ್ದಾರೆ” ಎಂದು ನಳಿನ್ ಕುಮಾರ್ ತಿಳಿಸಿದ್ದಾರೆ.

ಆಗಸ್ಟ್​ 30ರಂದು ಟ್ವೀಟ್​ ಮೂಲಕ ತಮಗೆ ಕರೊನಾ ಪಾಸಿಟಿವ್​ ಬಂದಿರುವುದನ್ನು ಇವರು ಖಚಿತಪಡಿಸಿದ್ದರು. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ ಸಂಭ್ರಮದ ಬೆನ್ನಲ್ಲೇ, ಕರೊನಾ ಸೋಂಕು ಕಾಣಿಸಿಕೊಂಡಿತ್ತು.

ನಾನು ಕೋವಿಡ್ ​19 ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದಿದ್ದರು. ಜತೆಗೆ, ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಟ್ವಿಟರ್​ ಮೂಲಕ ಮನವಿ ಮಾಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net