More

    ಕೇರಳದಲ್ಲಿ ನ್ಯೂರೋ ವೈರಸ್‌: ಕರ್ನಾಟಕದಲ್ಲಿ ಕಟ್ಟೆಚ್ಚರ- ಹೊಟ್ಟೆನೋವು, ವಾಂತಿ, ಭೇದಿ ನಿರ್ಲಕ್ಷ್ಯಬೇಡ…

    ಚಾಮರಾಜನಗರ: ಕೇರಳದ ವಯನಾಡಿನಲ್ಲಿ ನ್ಯೂರೋ ವೈರಸ್ ಪತ್ತೆಯಾಗಿದ್ದು ರಾಜ್ಯದಲ್ಲಿಯೂ ಆತಂಕ ಸೃಷ್ಟಿಸಿದೆ. ಕರ್ನಾಟಕದ ಕೆಲವು ಭಾಗಗಳಲ್ಲಿ ಈ ಬಗ್ಗೆ ಇದಾಗಲೇ ಸಾಕಷ್ಟು ಮುಂಜಾಗರೂಕತಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.

    ವಯನಾಡಿನಲ್ಲಿ ವೈರಸ್‌ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಬಂಡೀಪುರದ ಮೂಲೆಹೊಳೆ ಚೆಕ್ ಪೋಸ್ಟ್‌ನಲ್ಲಿ ಪ್ರಯಾಣಿಕರ ತಪಾಸಣೆ ಮಾಡಲಾಗುತ್ತಿದ್ದು, ಸೋಂಕು ಇದೆಯೇ ಎಂಬ ಬಗ್ಗೆ ಗಮನ ಹರಿಸಲಾಗುತ್ತಿದೆ.

    ಇದೇ ವೇಳೆ ವೈದ್ಯರು ಸಲಹೆ ನೀಡಿದ್ದು, ಯಾವುದೇ ಕಾರಣಕ್ಕೂ ವಾಂತಿ ,ಭೇದಿ, ಹೊಟ್ಟೆನೋವು ಶುರುವಾದರೆ ಕೂಡಲೇ ಆರೋಗ್ಯ ಕೇಂದ್ರಗಳಿಗೆ ಹೋಗಿ ತಪಾಸಣೆ ಮಾಡಿಸಿಕೊಳ್ಳಿ ಎಂದಿದ್ದಾರೆ. ಈ ಹಿಂದೆ ಕರೊನಾ, ನಿಫಾ, ಡೆಲ್ಟಾ ಸೇರಿದಂತೆ ಹಲವು ವೈರಸ್‌ಗಳು ಮೊದಲು ಕೇರಳದಲ್ಲಿಯೇ ಕಾಣಿಸಿಕೊಂಡಿವೆ. ಈಗ ಕೇರಳದಲ್ಲಿ 13ಕ್ಕಿಂತ ಅಧಿಕ ನ್ಯೂರೋ ವೈರಸ್‌ ಪ್ರಕರಣಗಳು ಪತ್ತೆಯಾಗಿವೆ.

    ಚಾಮರಾಜನಗರದ ಗಡಿ ಭಾಗದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 24 ಚಿಕಿತ್ಸಾ ಸೌಲಭ್ಯಕ್ಕೆ ಡಿಎಚ್ಓ ಸೂಚನೆ ಕೊಟ್ಟಿದ್ದಾರೆ. ಗುಂಡ್ಲುಪೇಟೆ ಪಟ್ಟಣದ ಮಾರುಕಟ್ಟೆ ಬೀದಿಗಳಲ್ಲಿ ಸ್ವಚ್ಚತೆ ಬಗ್ಗೆ ಅರಿವು ಮೂಡಿಸಲಾಗಿದೆ. ಈ ಜಿಲ್ಲೆಯಷ್ಟೇ ಅಲ್ಲದೇ ಹಲವು ಜಿಲ್ಲೆಗಳಲ್ಲಿ ಕೂಡ ಇದರ ಭಯ ಇರುವ ಕಾರಣ, ಈ ಲಕ್ಷಣಗಳು ಕಂಡುಬಂದರೆ ಕೂಡಲೇ ತಪಾಸಣೆ ಮಾಡಿಸಿಕೊಳ್ಳಿ ಎಂದು ವೈದ್ಯರು ಸೂಚನೆ ನೀಡಿದ್ದಾರೆ.

    VIDEO: ಭಯಾನಕ ಮಳೆಯಲ್ಲಿ ಪುನೀತ್‌ ಬ್ಯಾನರ್‌ ಎದುರು ಕೈಮುಗಿದು ಕುಳಿತ ಅಭಿಮಾನಿ- ವಿಡಿಯೋ ವೈರಲ್‌

    ಕೃಷಿ ಕಾಯ್ದೆಯ ಪ್ರತಿಭಟನೆ ಬಂದ್‌ ಆಗ್ತಿರೋ ಬೆನ್ನಲ್ಲೇ ಸಿಎಎ ವಿರುದ್ಧ ಹೋರಾಟಕ್ಕೆ ಸಜ್ಜಾಗಿದ್ದಾರೆ ಪ್ರತಿಭಟನಾಕಾರರು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts