More

    ಹೊಸ ಶಿಕ್ಷಣ ನೀತಿ ಹೇಗಿರಲಿದೆ? ಪ್ರಧಾನಿಯಿಂದ ನಾಳೆ ಸಂಪೂರ್ಣ ವಿವರ…

    ನವದೆಹಲಿ: ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ನಾಳೆ ಶುಕ್ರವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಸಂಪೂರ್ಣ ಮಾಹಿತಿಯನ್ನು ಕೇಳಿ ಪಡೆಯಬಹುದಾಗಿದೆ. ಬೆಳಗ್ಗೆ 11 ಗಂಟೆಗೆ ಪ್ರಧಾನಿಯವರು ಮಾತನಾಡಲಿದ್ದಾರೆ.

    1986ರಲ್ಲಿ ರೂಪಿಸಲಾಗಿದ್ದ ಶಿಕ್ಷಣ ನೀತಿಯನ್ನು ಬದಲಾವಣೆ ಮಾಡಲಾಗಿದ್ದು, ಅದರ ಕುರಿತು ಪ್ರಧಾನಿಯವರು ಮಾಹಿತಿ ನೀಡಲಿದ್ದಾರೆ. ‘ರಾಷ್ಟ್ರೀಯ ಶಿಕ್ಷಣ ನೀತಿ ಅಡಿಯಲ್ಲಿ ಉನ್ನತ ಶಿಕ್ಷಣದಲ್ಲಿ ಪರಿವರ್ತನೆ ಹಾಗೂ ಸುಧಾರಣೆಗಳ ಸಮಾವೇಶ’ವನ್ನು ಉದ್ಘಾಟಿಸಿ ಪ್ರಧಾನಿಯವರು ಮಾತನಾಡಲಿದ್ದಾರೆ.

    https://twitter.com/narendramodi/status/1291363838235828225

    ಯುಜಿಸಿ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಜಂಟಿಯಾಗಿ ಈ ಸಮಾವೇಶ ಆಯೋಜನೆ ಮಾಡಿವೆ. ಉದ್ಘಾಟನಾ ಭಾಷಣ ಮಾಡಲಿರುವ ಪ್ರಧಾನಿ ಮೋದಿ ಹೊಸ ಶಿಕ್ಷಣ ನೀತಿ ಬಗ್ಗೆ ಜನರ ಜೊತೆ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ.

    ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿ ಘೋಷಣೆ ಮಾಡಿದ ಬಳಿಕ ಮೊದಲ ಬಾರಿಗೆ ಮೋದಿ ಶಿಕ್ಷಣದ ಬಗ್ಗೆ ಮಾತನಾಡುತ್ತಿದ್ದು, ನಾಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ಅವರು ವಿವರಣೆ ನೀಡಲಿದ್ದಾರೆ.

    ಸಮಗ್ರ ಹಾಗೂ ಭವಿಷ್ಯದ ಶಿಕ್ಷಣ, ಗುಣಮಟ್ಟದ ಸಂಶೋಧನೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ತಂತ್ರಜ್ಞಾನದ ಅಳವಡಿಕೆ ಕುರಿತು ಚರ್ಚೆಗಳು ನಡೆಯಲಿದ್ದು, ಈ ಸಂದರ್ಭದಲ್ಲಿ ಹೊಸ ಶಿಕ್ಷಣ ನೀತಿಯ ಪ್ರಯೋಜನೆಗಳ ಕುರಿತು ಅವರು ಜನರಿಗೆ ಮನದಟ್ಟು ಮಾಡಿಕೊಡಲಿದ್ದಾರೆ.

    ಸುಷ್ಮಾ ಸ್ವರಾಜ್​ ಮೊದಲ ಪುಣ್ಯತಿಥಿಯಂದು ಗೌರವ ಸಲ್ಲಿಸಿದ ಪ್ರಧಾನಿ ಮೋದಿ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts