More

    ಸರ್ಕಾರಕ್ಕೆ ಎರಡು ದಿನಗಳ ಗಡುವು- ಇಲ್ಲದಿದ್ದರೆ ಸಾರಿಗೆಯಲ್ಲಿ ವ್ಯತ್ಯ: ಪ್ರಯಾಣಿಕರಿಗೆ ತಟ್ಟಲಿದೆ ಬಸ್‌ ಬಿಸಿ

    ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದಾಗಲೇ ಸಾರಿಗೆ ನೌಕರರು ಅನೇಕ ಬಾರಿ ಮುಷ್ಕರ ಮಾಡಿದ್ದಾರೆ. ಆದರೆ ಇದುವರೆಗೂ ತಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸಿಲ್ಲ ಎನ್ನುವುದು ಅವರ ಆರೋಪ.

    ಈ ಹಿನ್ನೆಲೆಯಲ್ಲಿ ಏಪ್ರಿಲ್ 7ಕ್ಕೆ ಸಾರಿಗೆ ನೌಕರರ ಕೂಟ ಮುಷ್ಕರಕ್ಕೆ ಕರೆ ಕೊಟ್ಟಿದೆ. ಈ ಕುರಿತು ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

    ಸಾರಿಗೆ ನೌಕರರ ಮುಷ್ಕರದ ರೂಪುರೇಷೆಗಳ ಕುರಿತು ಸುದ್ದಿಗೋಷ್ಠಿ ನಡೆಸಿರುವ ಅವರು, ಸಾರಿಗೆ ನೌಕರರ ಬೇಡಿಕೆ ಈಡೇರದ ಹಿನ್ನೆಲೆ ಮುಷ್ಕರ ನಡೆಸುವುದು ಅನಿವಾರ್ಯ ಎಂದು ಹೇಳಿದ್ದಾರೆ. ಏಪ್ರಿಲ್ 1ಕ್ಕೆ ಮತ್ತೊಂದು ಸುತ್ತಿನ ಮಾತುಕತೆಗೆ ಸಾರಿಗೆ ಇಲಾಖೆ ನಮ್ಮನ್ನ ಕರೆದಿದೆ. ನಮ್ಮ ಬೇಡಿಕೆಗಳು ಈಡೇರಿದರೆ ನಾವು ಮುಷ್ಕರ ಕೈ ಬಿಡಲು ಸಿದ್ಧ ಎಂದು ಕೋಡಿಹಳ್ಳಿ ಚಂದ್ರಶೇಖರ ಹೇಳಿದ್ದಾರೆ.

    ಸಾರಿಗೆ ನೌಕರರನ್ನ 6ನೇ ವೇತನ ಆಯೋಗದ ಅಡಿಯಲ್ಲಿ ತರಬೇಕು ಎನ್ನುವುದು ನಮ್ಮ ಪ್ರಮುಖ ಬೇಡಿಕೆಯಾಗಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಸಾರಿಗೆ ಸಚಿವರು ಹೇಳಿರುವ ಹಳೆ ಮಾತುಗಳನ್ನೇ ಪದೇ ಪದೇ ಹೇಳುತ್ತಿದ್ದಾರೆ. ನಮ್ಮ ಬೇಡಿಕೆ ಇದುವರೆಗೆ ಈಡೇರಲಿಲ್ಲ. ಈ ಹಿನ್ನೆಲೆಯಲ್ಲಿ ಏಪ್ರಿಲ್ 7ರಂದು ಬಸ್ ಬಂದ್ ಮಾಡಿ ನಮ್ಮ ಸತ್ಯಾಗ್ರಹ ಮುಂದುವರಿಸಲಾಗುತ್ತದೆ ಎಂದು ಅವರು ಹೇಳಿದರು.

    ಏಪ್ರಿಲ್ 1 ರಿಂದ 7ನೇ ತಾರಿಕಿನ ವರೆಗೆ ವಿವಿಧ ರೀತಿಯ ಪ್ರತಿಭಟನೆ ಮಾಡಲಾಗುತ್ತದೆ. ಏಪ್ರಿಲ್ 1 ರಂದು ಎಲ್ಲಾ ನಿಗಮಗಳ ನೌಕರರು ಕೈಗೆ ಕಪ್ಪು ಪಟ್ಟಿ ಧರಿಸಿ ಕೆಲಸ ನಿರ್ವಹಣೆ ಮಾಡಲಿದ್ದಾರೆ, 2 ರಂದು ಬೆಂಗಳೂರು ಹೊರತು ಪಡಿಸಿ ರಾಜ್ಯದ ಎಲ್ಲಾ ಕಡೆಗಳಲ್ಲಿ ರಸ್ತೆಬದಿಯಲ್ಲಿ ಬಸ್ ನಿಲ್ದಾಣಗಳಲ್ಲಿ ವಡೆ ಬೋಂಡಾ ಹಾಕಿ ವಿಭಿನ್ನ ಪ್ರತಿಭಟನೆ ಮಾಡಲಾಗುವುದು ಹಾಗೂ 7ನೇ ತಾರೀಖು ಎಲ್ಲರೂ ಬಸ್ ಬಂದ್ ಮಾಡಿ ಮುಷ್ಕರದಲ್ಲಿ ಎಲ್ಲಾ ಸಾರಿಗೆ ನಿಗಮಗಳ ನೌಕರರು ಭಾಗಿಯಾಗಲಿದ್ದಾರೆ ಎಂದು ವಿವರಣೆ ನೀಡಿದರು.

    ತುಂಬು ಗರ್ಭಿಣಿಯನ್ನು ಉರಿಬಿಸಿಲಲ್ಲಿ ನಡೆಸಿದ ಲೇಡಿ ಪೊಲೀಸ್‌ ಇನ್ಸ್‌ಪೆಕ್ಟರ್‌! ಇಲಾಖೆಯಿಂದ ಅಮಾನತು

    ತೈಲ ಸಂಸ್ಕರಣಾ ಘಟಕದಲ್ಲಿ ಭಯಾನಕ ಸ್ಫೋಟ: ಮುಗಿಲಿಗೆ ಚಿಮ್ಮಿದ ಅಗ್ನಿಯ ಜ್ವಾಲೆ: ಹಲವರು ನಾಪತ್ತೆ

    ಚೀನಾದ ಲಸಿಕೆ ಪಡೆದು ಪ್ರಧಾನಿ ಕರೊನಾ ಸೋಂಕು ತರಿಸಿಕೊಂಡ ಬೆನ್ನಲ್ಲೇ ಈಗ ರಾಷ್ಟ್ರಪತಿ ಸರದಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts