More

    ಸಚಿವಾಲಯದ ಸಿಬ್ಬಂದಿಗೆ ಗುಡ್‌ನ್ಯೂಸ್‌ ಕೊಟ್ಟ ಸರ್ಕಾರ: 13ರವರೆಗೆ ಕೆಲಸಕ್ಕೆ ಬರದಿದ್ದರೂ ಓಕೆ…

    ಬೆಂಗಳೂರು: ಕರೊನಾ ಹಿನ್ನೆಲೆಯಲ್ಲಿ ಲಾಕ್‌ಡೌನ್‌ 14ರವರೆಗೆ ವಿಸ್ತರಣೆ ಮಾಡಿರುವ ಬೆನ್ನಲ್ಲೇ ರಾಜ್ಯ ಸಚಿವಾಲಯದ ಎಲ್ಲಾ ಅಧಿಕಾರಿ, ನೌಕರರು, ಸಿಬ್ಬಂದಿಗೆ ಕಚೇರಿಯ ಹಾಜರಾತಿಯಿಂದ ಸರ್ಕಾರ ವಿನಾಯಿತಿ ನೀಡಿದೆ.

    ಈ ಕುರಿತು ಸುತ್ತೋಕೆ ಹೊರಡಿಸಲಾಗಿದ್ದು, ಜೂನ್.13ರವರೆಗೆ ಕಚೇರಿ ಹಾಜರಾತಿಯಿಂದ ವಿನಾಯ್ತಿ ನೀಡಲಾಗಿದೆ ಎಂದು ತಿಳಿಸಲಾಗಿದೆ. ಈ ಮೊದಲು ಜೂನ್‌ 6ರವರೆಗೆ ಕಚೇರಿಯಿಂದ ವಿನಾಯಿತಿ ನೀಡಲಾಗಿತ್ತು. ಅದನ್ನೀಗ 13ರವರೆಗೆ ವಿಸ್ತರಿಸಲಾಘಿದೆ ಎಂದು ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

    ಈ ಎಲ್ಲ ಅಧಿಕಾರಿ, ನೌಕರರುಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಲಭ್ಯವಿರಬೇಕು. ಸಂಬಂಧ ಪಟ್ಟ ಶಾಖೆಯ ಮೇಲಾಧಿಕಾರಿಗಳು ಇಚ್ಛಿಸಿದಲ್ಲಿ ಅಗತ್ಯ ಮತ್ತು ತುರ್ತು ಸಂದರ್ಭವಿರುವ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಆಯಾ ಅಧಿಕಾರಿ, ನೌಕರರುಗಳು ಯಾವುದೇ ಕಾರಣಗಳನ್ನು ನೀಡದೇ ಕಚೇರಿಗೆ ಕಡ್ಡಾಯವಾಗಿ ಹಾಜರಾಗತಕ್ಕದ್ದು ಎಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.

    ಸಚಿವಾಲಯದ ಸಿಬ್ಬಂದಿಗೆ ಗುಡ್‌ನ್ಯೂಸ್‌ ಕೊಟ್ಟ ಸರ್ಕಾರ: 13ರವರೆಗೆ ಕೆಲಸಕ್ಕೆ ಬರದಿದ್ದರೂ ಓಕೆ...

    ಮೂರನೆಯ ಅಲೆಗೆ ಮಕ್ಕಳೇ ಟಾರ್ಗೆಟ್ಟಾ? ಕರೊನಾ ನಿರ್ವಹಣೆ ತಂಡದ ತಜ್ಞ ಇಲ್ಲಿ ವಿವರಿಸಿದ್ದಾರೆ ನೋಡಿ…

    ಸಂಸದೆಗೆ ಟೈಟ್‌ ಪ್ಯಾಂಟ್‌ ತಂದ ಫಜೀತಿ- ಸಂಸತ್ತಿನ ಒಳಗೆ ಹೋಗ್ತಿದ್ದಂತೆಯೇ ಶುರುವಾಯ್ತು ಪ್ರತಿಭಟನೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts