More

    ಆಮ್ಲಜನಕ ಸರಬರಾಜು ಮೇಲುಸ್ತುವಾರಿಗೆ ಜಿಲ್ಲೆಗಳಲ್ಲಿ ನೋಡಲ್‌ ಅಧಿಕಾರಿ: ಸಚಿವ ಜಗದೀಶ್‌ ಶೆಟ್ಟರ್‌

    ಬೆಂಗಳೂರು: ರಾಜ್ಯ ಹಾಗೂ ದೇಶದಲ್ಲಿ ಆಮ್ಲಜನಕದ ಬೇಡಿಕೆಯ ಪ್ರಮಾಣ ದಿನೇ ದಿನೇ ಕಡಿಮೆ ಆಗುತ್ತಿದೆ. ಈ ಹಿನ್ನಲೆಯಲ್ಲಿ ಕೈಗಾರಿಕೆಗಳಿಗೂ ಸ್ವಲ್ಪ ಪ್ರಮಾಣದಲ್ಲಿ ಆಮ್ಲಜನಕ ಪೂರೈಕೆಗೆ ಕೇಂದ್ರ ಸರಕಾರ ಅನುಮತಿಯನ್ನು ನೀಡಿದೆ. ಈ ಪ್ರಕ್ರಿಯೆಯಲ್ಲಿ ಗೊಂದಲ ಉಂಟಾಗದೆ ಆಸ್ಪತ್ರೆಗಳಿಗೆ ಆದ್ಯತೆ ಮೇರೆಗೆ ಆಮ್ಲಜನಕ ಪೂರೈಕೆ ಮಾಡಿಸುವ ನಿಟ್ಟಿನಲ್ಲಿ ಜಿಲ್ಲಾವಾರು ನೋಡಲ್‌ ಆಫೀಸರ್‌ ನೇಮಕ ಮಾಡಲು ನಿರ್ಧರಿಸಲಾಗಿದೆ ಎಂದು ರಾಜ್ಯದ ಆಮ್ಲಜನಕ ಉತ್ಪಾದನೆ ಹಾಗೂ ಸರಬರಾಜು ಉಸ್ತುವಾರಿ ಮತ್ತು ಬೃಹತ್‌ ಹಾಗೂ ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್‌ ಶೆಟ್ಟರ್‌ ತಿಳಿಸಿದರು.

    ಇಂದು ವಿಧಾನಸೌಧದಲ್ಲಿ ರಾಜ್ಯದಲ್ಲಿನ ಆಮ್ಲಜನಕ ಉತ್ಪಾದನೆ ಹಾಗೂ ಸರಬರಾಜು ಕುರಿತಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದ ಸಚಿವ ಜಗದೀಶ್‌ ಶೆಟ್ಟರ್‌ ನಂತರ ಈ ವಿಷಯ ತಿಳಿಸಿದರು.

    ರಾಜ್ಯದಲ್ಲಿ ಮತ್ತು ದೇಶದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದೆ. ಇದರಿಂದಾಗಿ ಆಮ್ಲಜನಕದ ಬೇಡಿಕೆಯೂ ಕಡಿಮೆ ಆಗುತ್ತಿದೆ. ಕಳೆದ ಎರಡು ದಿನಗಳನ್ನು ಗಮನಿಸಿದಲ್ಲಿ ಸಾರಾಸರಿಯಾಗಿ 580 ಎಂ.ಟಿಗಳಷ್ಟು ಮಾತ್ರ ಆಮ್ಲಜನಕದ ಬೇಡಿಕೆ ಇದೆ. ಆದರೆ, ಬೇಡಿಕೆ ಕಡಿಮೆ ಆಗಿರುವುದರಿಂದ ಹೆಚ್ಚಿನ ಗಮನ ನೀಡದೇ ಇರುವುದು ಸರಿಯಲ್ಲ.

    ಮುಂದಿನ ಮೂರನೇ ಅಲೆಗೆ ಪರಿಸ್ಥಿತಿ ತಿಳಿಯಾಗಿರುವ ಸಂದರ್ಭದಲ್ಲೇ ಅಗತ್ಯ ತಯಾರಿ ಮಾಕೊಳ್ಳಬೇಕು. ಈ ಹಿನ್ನಲೆಯಲ್ಲಿ ಜಿಲ್ಲಾವಾರು ಆಸ್ಪತ್ರೆಗಳನ್ನು ಆಮ್ಲಜನಕ ಸ್ವಾವಲಂಬಿ ಮಾಡಬೇಕು. ಅಲ್ಲದೆ, ಜಿಲ್ಲೆಗಳಲ್ಲಿ ಬಫರ್‌ ಸ್ಟಾಕ್‌ ಸಂಗ್ರಹಣೆಗೆ ಅಗತ್ಯವಿರುವ ಸೌಲಭ್ಯಗಳನ್ನು ನಿರ್ಮಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಸೂಚನೆ ನೀಡಿದರು.

    ಮನೆಬಾಗಿಲಿಗೆ ಆನಂದಯ್ಯನವರ ಆಯುರ್ವೇದ ಔಷಧ: ಟಿಟಿಡಿಯಿಂದ ದೇಶಾದ್ಯಂತ ಪೂರೈಕೆಗೆ ಮುಂದಾದ ಸರ್ಕಾರ

    VIDEO: ಅಂತಿಂಥ ಗಂಡ ಇವನಲ್ಲ… 28 ಪತ್ನಿಯರ ಸಮ್ಮುಖದಲ್ಲಿ 37ನೇ ಮದುವೆಯಾದ ‘ಪತಿದೇವ’!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts