More

    ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಯೋಧರು- ಹೆದ್ದಾರಿ ಕ್ಲೋಸ್​

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ವಿವಿಧ ಭಾಗಗಳಲ್ಲಿ ಉಗ್ರರ ಉಪಟಳ ಮುಗಿದಿಲ್ಲ. ಒಂದೆಡೆ ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸುತ್ತಿದ್ದರೆ, ಇನ್ನೊಂದೆಡೆ ಬೇರೆ ಬೇರೆ ಪ್ರದೇಶಗಳಿಂದ ಕಿತಾಪತಿ ಮಾಡುತ್ತಲೇ ಇದ್ದಾರೆ.

    ಇದಾಗಲೇ ಹಲವಾರು ಉಗ್ರರನ್ನು ಭಾರತೀಯ ಯೋಧರು ಹೊಡೆದುರುಳಿಸಿದ್ದಾರೆ. ಅದೇ ರೀತಿಯ ಕಾರ್ಯಾಚರಣೆ ಮುಂದುವರೆದಿದ್ದು, ಇಂದು ನಾಗ್ರೋಟಾ ಪ್ರದೇಶದ ಬಾನ್ ಟೋಲ್ ಪ್ಲಾಜಾ ಬಳಿ ನಾಲ್ವರು ಭಯೋತ್ಪಾದಕರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ.

    ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‍ಕೌಂಟರ್​ನಲ್ಲಿ ಭಾರತೀಯ ಯೋಧರು ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ. ಎನ್​ಕೌಂಟರ್​ ಹಿನ್ನೆಲೆಯಲ್ಲಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯನ್ನು ಮುಚ್ಚಲಾಗಿದೆ. ಇಲ್ಲಿಯ ಸುತ್ತಮುತ್ತಲಿನ ಪ್ರದೇಶದಲ್ಲೂ ಭದ್ರತೆ ಬಿಗಿಗೊಳಿಸಲಾಗಿದೆ.

    ಟ್ರಕ್ ಒಳಗೆ ಭಯೋತ್ಪಾದಕರು ಅಡಗಿಕುಳಿತಿರುವ ಬಗ್ಗೆ ಯೋಧರಿಗೆ ಮಾಹಿತಿ ಸಿಕ್ಕಿದ್ದು, ಈ ಕಾರ್ಯಾಚರಣೆ ನಡೆಸಿದ್ದಾರೆ. ಆದರೆ ಒಟ್ಟು ಭಯೋತ್ಪಾದಕರ ಸಂಖ್ಯೆಯ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ. ಟ್ರಕ್ ಒಳಗಿದ್ದ ಶಸ್ತ್ರಾಸ್ತ್ರ ಮತ್ತು ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಭದ್ರತಾ ಪಡೆಗಳು ಬಾನ್ ಟೋಲ್ ಪ್ಲಾಜಾ ಬಳಿ ನಾಕಾ ಹಾಕುತ್ತಿದ್ದಂತೆ ವಾಹನಗಳ ತಪಾಸಣೆಯ ಸಮಯದಲ್ಲಿ ಭಯೋತ್ಪಾದಕರ ಗುಂಪು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿತು. ಭಯೋತ್ಪಾದಕರು ಅರಣ್ಯ ಪ್ರದೇಶದ ಕಡೆಗೆ ಓಡಿಹೋದರು. ಆಗ ಎನ್ಕೌಂ​ಟರ್ ಪ್ರಾರಂಭವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಇತ್ತೀಚೆಗೆ ಜಮ್ಮುವಿನ ಅಂತಾರಾಷ್ಟ್ರೀಯ ಗಡಿಯಿಂದ ಭಯೋತ್ಪಾದಕರ ಗುಂಪು ನುಸುಳುತ್ತಿದ್ದವು ಎಂದು ಮೂಲಗಳು ತಿಳಿಸಿವೆ. ಭಯೋತ್ಪಾದಕರು ಟ್ರಕ್ ಒಳಗೆ ಅಡಗಿಕೊಂಡು ಕಾಶ್ಮೀರ ಕಣಿವೆಯಲ್ಲಿ ಸಾಗುತ್ತಿದ್ದರು. ಆಗ ಟ್ರಕ್ ತಡೆದು ತಪಾಸಣೆ ಮಾಡುವ ಸಮಯದಲ್ಲಿ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದರು.

    2020ರಲ್ಲಿ ಜಮ್ಮು ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿರುವ ಇದು ಎರಡನೇ ಕಾರ್ಯಾಚರಣೆಯಾಗಿದೆ. ಜನವರಿಯಲ್ಲಿ ಮೂರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಗುಂಡಿಕ್ಕಿ ಕೊಂದಿದ್ದವು. ಟ್ರಕ್ ಒಳಗೆ ಅಡಗಿಕೊಂಡು ಇದೇ ರೀತಿಯಾಗಿ ನುಸುಳಿ ಹೋಗುತ್ತಿದ್ದರು. ಇಂತಹ ಘಟನೆ ಮತ್ತೆ ಮರುಕಳಿಸಿದೆ.

    42 ಲೀಟರ್​ ಎದೆಹಾಲು ನೀಡಿ ‘ಮಹಾತಾಯಿ’ ಎನಿಸಿಕೊಂಡ ನಿರ್ಮಾಪಕಿ…

    ಅರೆಬೆತ್ತಲೆ ಫೋಟೋಗೆ ಪೋಪ್ ಕೊಟ್ಟರಂತೆ ಲೈಕ್​- ಅವರನ್ನು ಹುಡುಕಿ ಹೋಗ್ತಾಳಂತೆ ಈಕೆ…

    ಡಿ.5ರಂದು ಕರ್ನಾಟಕ ಬಂದ್​ಗೆ ಕರೆ: ಮುಖ್ಯಮಂತ್ರಿ ಏನೆಂದ್ರು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts