

ವಾರಣಾಸಿ: ಭಾರತ- ಜಪಾನ್ ಸ್ನೇಹದ ಪ್ರತೀಕವಾಗಿರುವ ಕನ್ವೆಂಷನ್ ಸೆಂಟರ್ ರುದ್ರಾಕ್ಷ ಸೇರಿ ಅನೇಕ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಗೊಳಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಸಂಸದೀಯ ಕ್ಷೇತ್ರ ವಾರಾಣಸಿ ತಲುಪಿದ್ದಾರೆ.
ಈ ಸಂದರ್ಭದಲ್ಲಿ ಅವರು ವಿಮಾನದಿಂದ ಇಳಿಯುತ್ತಿದ್ದಂತೆಯಾ ಅವರನ್ನು ಸ್ವಾಗತಿಸಲು ರಾಜ್ಯಪಾಲರಾಗಿರುವ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿ ಅನೇಕ ಗಣ್ಯರು ನಿಂತಿದ್ದರು. ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತೆಯೊಬ್ಬರು ಅಲ್ಲಿ ಹಾಜರಿದ್ದರು. ಮೋದಿಯವರು ಬರುತ್ತಿದ್ದಂತೆಯೇ ಮಹಿಳೆ ಅವರ ಪಾದ ಮುಟ್ಟಿ ನಮಸ್ಕರಿಸಲು ಬಗ್ಗಿದರು. ಅಷ್ಟರಲ್ಲಿಯೇ ಮೋದಿಯವರು ಮಹಿಳೆಯನ್ನು ತಡೆದು ತಾವೇ ಅವರಿಗೆ ಕೈಮುಗಿದು ತಲೆಬಾಗಿ ನಮಸ್ಕರಿಸಿದ್ದಾರೆ.
ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ನಡೆಗೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗುತ್ತಿದೆ. ಜಾಲತಾಣದಲ್ಲಿ ಈ ಕುರಿತ ವಿಡಿಯೋ ವೈರಲ್ ಆಗಿದ್ದು, ಮೆಚ್ಚುಗೆ ವ್ಯಕ್ತವಾಗಿದೆ.
ಪ್ರಧಾನಿ ಮೋದಿಯವರು ಸುಮಾರು 744 ಕೋಟಿ ರೂ. ವೆಚ್ಚದ ವಿಭಿನ್ನ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಅಲ್ಲದೇ ಸುಮಾರು 839 ಕೋಟಿ ರೂ.ಗಳ ವೆಚ್ಚದ ಹಲವಾರು ಯೋಜನೆಳಿಗೆ ಶಿಲಾನ್ಯಾಸ ಮಾಡಲಿದ್ದಾರೆ. ಬಿಎಚ್‌ಯುನಲ್ಲಿ ನೂರು ಬೆಡ್‌ಗಳ ಎಂಸಿಎಚ್ ವಿಂಗ್, ಗೋದೌಲಿಯಾದಲ್ಲಿ ಒಂದು ಬಹುಮಹಡಿ ಪಾರ್ಕಿಂಗ್ ಗಂಗಾ ನದಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ರೋ-ರೋ ಬೋಟ್‌ಗಳು ಮತ್ತು ವಾರಣಾಸಿ-ಗಾಜಿಪುರ ಹೆದ್ದಾರಿಯಲ್ಲಿ ತ್ರಿಪಥದ ಫ್ಲೈಓವರ್ ಸೇರಿ ಇನ್ನೂ ಕೆಲ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದಾರೆ.
ಪ್ರಧಾನಿ ಮೋದಿಗೆ ಮಹಿಳೆ ನಮಸ್ಕಾರ ಮಾಡಿರುವ ವಿಡಿಯೋ ಇಲ್ಲಿದೆ ನೋಡಿ: (ಕೃಪೆ ಎಬಿಪಿ ನ್ಯೂಸ್)