ದೇಶವನ್ನುದ್ದೇಶಿಸಿ ಇಂದು ಪ್ರಧಾನಿ ಮೋದಿ ಭಾಷಣ: ಜನತೆಯಲ್ಲಿ ತೀವ್ರ ಕುತೂಹಲ

modi
Published on

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಜೂನ್‌ 7) ಸಂಜೆ 5 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದು ಕುತೂಹಲಕ್ಕೆ ಕಾರಣವಾಗಿದೆ.

ಇದಾಗಲೇ ಹಲವು ರಾಜ್ಯಗಳಲ್ಲಿ ಲಾಕ್‌ಡೌನ್‌ ಮಾಡಲಾಗಿದ್ದು, ಕೆಲವು ರಾಜ್ಯಗಳು ಲಾಕ್‌ಡೌನ್‌ ಸಡಿಲಗೊಳಿಸುತ್ತಿವೆ. ಕೆಲವೆಡೆ ಇನ್ನೂ ಲಾಕ್‌ಡೌನ್‌ ಸಡಿಲಿಕೆ ಆಗಿಲ್ಲ. ಈ ಹಿನ್ನೆಲೆಯಲ್ಲಿ ಪ್ರಧಾನಿ ಏನೆಲ್ಲಾ ಮಾತನಾಡಬಹುದು ಎಂಬ ಬಗ್ಗೆ ತೀವ್ರ ಕುತೂಹಲ ಉಂಟಾಗಿದೆ.

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ದೇಶದ ಬಹುತೇಕ ನಗರಗಳಲ್ಲಿ ಸೋಂಕಿನ ಪ್ರಮಾಣ ಕಡಿಮೆ ಆಗುತ್ತಿರುವುದಾಗಿ ವರದಿಯಾಗಿದೆ. ಇದರ ಬೆನ್ನಲ್ಲೇ ಪ್ರಧಾನಿ ಮೋದಿಯವರು ಭಾಷಣ ಮಾಡುತ್ತಿರುವುದರಿಂದ ಇದರ ಕುರಿತಾಗಿಯೇ ಹೇಳಲಿದ್ದಾರೆಯೇ ಅಥವಾ ಇನ್ನೇನು ಮಾತನಾಡಬಹುದು ಎಂಬ ಬಗ್ಗೆ ಕುತೂಹಲವಿದೆ.

ಕಳೆದ ವರ್ಷ ಇದೇ ಸಮಯದಲ್ಲಿ ಕರೊನಾ ಮೊದಲ ಅಲೆ ಇದ್ದಾಗ ಅನೇಕ ಬಾರಿ ಪ್ರಧಾನಿಯವರು ದೇಶವನ್ನು ಉದ್ದೇಶಿಸಿ ಮಾತನಾಡಿದ್ದರು. ಆದರೆ ಈ ಬಾರಿ ಎರಡೇ ಎರಡು ಸಲ ಮಾತನಾಡಿದ್ದಾರೆ. ಇದಾಗಲೇ ಮೋದಿಯವರು ಎರಡು ಬಾರಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಸಮಾಲೋಚನೆ ಮಾಡಿದ್ದಾರೆ. ಕೆಲವು ಮುಖ್ಯಮಂತ್ರಿಗಳು ತಾವು ಲಾಕ್‌ಡೌನ್‌ ಮುಂದುವರೆಸಿರುವುದಾಗಿ ಹೇಳಿದ್ದರೆ, ಕೆಲವರು ಅನ್‌ಲಾಕ್‌ ಪ್ರಕ್ರಿಯೆ ಶುರು ಮಾಡುವುದಾಗಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net