ನವದೆಹಲಿ: 2019ರ ಚುನಾವಣಾ ರ‍್ಯಾಲಿ ಸಂದರ್ಭದಲ್ಲಿ ಮೋದಿ ಸರ್‌ನೇಮ್ ಕುರಿತಾಗಿ ಮಾನಹಾನಿಯಾಗುವ ಹೇಳಿಕೆ ನೀಡಿ ಪೇಚಿಗೆ ಸಿಲುಕಿರುವ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಇವರ ವಿರುದ್ಧ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ದೂರು ದಾಖಲು ಮಾಡಿದ್ದರು.
ಅರ್ಜಿಯ ವಿಚಾರಣೆ ನಡೆಸಿದ್ದ ಸೂರತ್ನ ಮ್ಯಾಜಿಸ್ಟ್ರೇಟ್ ಕೋರ್ಟ್ ಮಾನಹಾನಿಗೆ ಸಂಬಂಧಿಸಿದಂತೆ ಕೋರ್ಟ್ ಮುಂದೆ ಹಾಜರಾಗಲು ಆದೇಶಿಸಿತ್ತು. ಈ ಆದೇಶದ ಅನ್ವಯ ರಾಹುಲ್ ಗಾಂಧಿ ಇಂದು ಕೋರ್ಟ್‌ಗೆ ಹಾಜರು ಆಗಿದ್ದರು.
2019ರ ಲೋಕಸಭೆ ಚುನಾವಣೆ ವೇಳೆ ಭಾಷಣ ಮಾಡ್ತಿದ್ದ ರಾಹುಲ್ ಗಾಂಧಿ, ಮೋದಿ ಎಂಬ ಉಪನಾಮ ಹೊಂದಿರುವವರೆಲ್ಲರೂ ಕಳ್ಳರು ಎಂಬ ಹೇಳಿಕೆ ನೀಡಿದ್ದರು. ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಈ ಹೆಸರು ಹೊಂದಿರುವವರನ್ನು ಉಲ್ಲೇಖಿಸಿದ್ದ ಅವರು, ಎಲ್ಲ ಮೋದಿಗಳೂ ಕಳ್ಳರು. ಮೋದಿ ಉಪನಾಮ ಹೊಂದಿರುವವರು ಕಳ್ಳರಾಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದರು.
ಇದರಿಂದ ಸಿಟ್ಟಿಗೆದ್ದಿದ್ದ ಪೂರ್ಣೇಶ್ ಮೋದಿ ದೂರು ದಾಖಲು ಮಾಡಿದ್ದರು. 2019ರ ಏಪ್ರಿಲ್ ತಿಂಗಳಲ್ಲಿ ರಾಹುಲ್ ಗಾಂಧಿ ವಿರುದ್ಧ ಐಪಿಸಿ ಸೆಕ್ಷನ್ 499 ಮತ್ತು 500ರ ಅಡಿ ಮಾನಹಾನಿ ಪ್ರಕರಣ ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಈಗ ಕೋರ್ಟ್‌ಗೆ ಹಾಜರು ಆಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದು ಮೂರನೆಯ ಬಾರಿ ಕೋರ್ಟ್‌ಗೆ ರಾಹುಲ್ ಹಾಜರು ಆಗುತ್ತಿರುವುದು.
VIDEO: ಈ ವಿಡಿಯೋ ನೋಡಿದ್ರೆ ಖಂಡಿತ ನೀವು ಕೊತ್ತಂಬರಿ ಸೊಪ್ಪಿಗೆ ದೊಡ್ಡ ನಮಸ್ಕಾರ ಹಾಕುವಿರಿ!
ಶಾರುಖ್ ಪುತ್ರನಿಗೆ ಇಲ್ಲ ಬಿಡುಗಡೆ ಭಾಗ್ಯ: ಜೈಲಿಗೆ ದೌಡಾಯಿಸಿ ಒಂದು ಲಕ್ಷ ರೂ. ನೀಡಿದ ನಟಿ ಜೂಹಿ ಚಾವ್ಲಾ