More

    ನಾಳೆಯಿಂದ ರಾಜ್ಯದಲ್ಲಿ ಮತ್ತೆ ಮಳೆ ಆತಂಕ! ಯಾವ್ಯಾವ ಭಾಗಗಳಲ್ಲಿ ಏನೇನು? ಹವಾಮಾನ ಇಲಾಖೆ ಮಾಹಿತಿ ಇಲ್ಲಿದೆ…

    ಬೆಂಗಳೂರು: ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಈಗಾಗಲೇ ಲಕ್ಷಾಂತರ ಹೆಕ್ಟೇರ್ ಪ್ರದೇಶಗಳಲ್ಲಿ ಬೆಳೆದಿರುವ ಬೆಳೆಗಳಿಗೆ ಹಾನಿಯಾಗಿದ್ದು, ರೈತರಿಗೆ ಕೈಗೆ ಬಂದ ತುತ್ತು ಬಾಯಿಗಿಲ್ಲ ಎಂಬಂತಾಗಿದೆ. ಇದೀಗ ಮತ್ತೆ ಮಳೆ ಆತಂಕ ಎದುರಾಗಲಿದೆ.

    ರಾಜ್ಯದಲ್ಲಿ ನ.26ರಿಂದ ಭಾರಿ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತ ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆಯಿದೆ. ಇದರ ಪರಿಣಾಮ ತಮಿಳುನಾಡಿನ ದಕ್ಷಿಣ ಭಾಗಗಳಲ್ಲಿ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಚಾಮರಾಜನಗರ ಮತ್ತು ತುಮಕೂರಿನಲ್ಲಿ ನ.26ರಿಂದ ಮುಂದಿನ 3 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಆದರೆ, ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಅಷ್ಟೇನೂ ಮಳೆ ಬೀಳುವುದಿಲ್ಲ ಎಂದು ಹವಾಮಾನ ತಜ್ಞ ಡಾ.ಶ್ರೀನಿವಾಸರೆಡ್ಡಿ ಮಾಹಿತಿ ನೀಡಿದರು.

    4 ದಿನ ಮಳೆ ಕ್ಷೀಣ: ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಮಳೆ ನ.22ರಿಂದ ನ.25ವರೆಗೆ ಕ್ಷೀಣಿಸಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಕೆಲ ಭಾಗಗಳಲ್ಲಿ ಮಳೆ ಪ್ರಮಾಣ ಇಳಿಮುಖವಾಗಿದ್ದು, ಕೆಲ ಜಿಲ್ಲೆಗಳಲ್ಲಿ ಮಾತ್ರ ಚದುರಿದಂತೆ ಸಾಧಾರಣೆ ಮಳೆಯಾಗಬಹುದು ಎಂದು ಇಲಾಖೆ ತಿಳಿಸಿದೆ.

    ನವಭಾರತ ನಿರ್ಮಿಸುವೆವು… ಆಗಸದೆತ್ತರಕ್ಕೆ ಹೋಗುವೆವು… ಮೋದಿ-ಯೋಗಿ ಜೋಡಿ… ಹೀಗಿದೆ ಸಿಎಂ ಕವಿತೆ…

    ರಾಮನಗರದ ಬಳಿ ಕೆರೆಗೆ ಪಲ್ಟಿ ಹೊಡೆದ ಕಾರು: ಮೂವರು ಯುವಕರ ದುರ್ಮರಣ- ಇಬ್ಬರ ಸ್ಥಿತಿ ಚಿಂತಾಜನಕ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts