More

    ವಾಯುಭಾರ ಕುಸಿತ: ಇಂದಿನಿಂದ ಭಾರಿ ಮಳೆ ಸಾಧ್ಯತೆ- 12 ಜಿಲ್ಲೆಗಳಲ್ಲಿ ಹೈ ಅಲರ್ಟ್‌

    ಬೆಂಗಳೂರು: ಬಂಗಾಳ ಉಪಸಾಗರದ ಒಡಿಶಾ ಹಾಗೂ ಆಂಧ್ರಪ್ರದೇಶದ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ರಾಜ್ಯಾದ್ಯಂತ ಇಂದಿನಿಂದ (ಆ.29) ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಕಾಖೆ ಹೇಳಿದೆ.

    ಕರ್ನಾಟಕ ಹಾಗೂ ಕೇರಳ ಕರಾವಳಿಯಲ್ಲಿ ಕಡಿಮೆ ಒತ್ತಡವಿರುವ ವಿಸ್ತರಿಸಿದ ಪ್ರದೇಶವಿದ್ದು ಈ ಪ್ರದೇಶದಲ್ಲಿ ಅಧಿಕ ಮಳೆ ಉಂಟಾಗಲಿದೆ. ಆಗಸ್ಟ್ 29ರಿಂದ ಸೆಪ್ಟೆಂಬರ್ 1ರವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಹೆಚ್ಚಿನ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಬಹುತೇಕ ಎಲ್ಲಾ ಕಡೆ ಮಳೆಯಾಗುವ ಸಾಧ್ಯತೆಯಿದೆ ಎಂದಿರುವ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್. ಪಾಟೀಲ್, ಕರಾವಳಿ ಹಾಗೂ ಒಳನಾಡು ಸೇರಿದಂತೆ 12 ಜಿಲ್ಲೆಗಳಲ್ಲಿ ಹೈ-ಅಲರ್ಟ್ ಘೋಷಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    ಉತ್ತರ ಕನ್ನಡ, ಚಾಮರಾಜನಗರ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಭಾರಿ ಹಾಗೂ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 29ರಂದು ಆರೆಂಜ್ ಅಲರ್ಟ್ ಹಾಗೂ ಆಗಸ್ಟ್ 30ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ, ಕಲಬುರಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಕೂಡ ಅಧಿಕ ಮಳೆಯಾಗುವ ಸಾಧ್ಯತೆ ಇದ್ದು, ಇಲ್ಲಿ ಈ ಎರಡು ದಿನಗಳು ಎಲ್ಲೋ ಅಲರ್ಟ್ ಘೋಷಿಸಲಾಗಿದ ಎಂದು ಅವರು ವಿವರಿಸಿದ್ದಾರೆ. ಇನ್ನು ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಮಳೆಯಾಗುವ ನಿರೀಕ್ಷೆಯಿದೆ ಎಂದಿದ್ದಾರೆ.

    ರಾಜ್ಯಾದ್ಯಂತ ಶನಿವಾರ ಚುರುಕಾಗಿದ್ದ ನೈರುತ್ಯ ಮುಂಗಾರಿನಿಂದಾಗಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಾಗಿದೆ. ಅದರಂತೆಯೇ ಉತ್ತರ ಒಳನಾಡಿನಲ್ಲಿ ಕೂಡ ಬಹುತೇಕ ಕಡೆ ಮಳೆಯಾಗಿದೆ.

    ಉಡುಪಿಯ ಬ್ರಹ್ಮಾವರದಲ್ಲಿ 13 ಸೆಂ.ಮೀ, ದಕ್ಷಿಣ ಕನ್ನಡದ ಸುಬ್ರಹ್ಮಣ್ಯಯಲ್ಲಿ 10 ಸೆಂ.ಮೀ, ಶಿವಮೊಗ್ಗದ ಆಗುಂಬೆಯಲ್ಲಿ 8 ಸೆಂ.ಮೀ., ಉಡುಪಿಯ ಕಾರ್ಕಳ, ಕೊಡಗಿನ ಭಾಗಮಂಡಲದಲ್ಲಿ ತಲಾ 7 ಸೆಂ.ಮೀ, ದಕ್ಷಿಣ ಕನ್ನಡದ ಮಣಿ, ಉತ್ತರ ಕನ್ನಡದ ಶಿರಾಲಿ, ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲಿ ತಲಾ 6 ಸೆಂ.ಮೀ, ಮಂಗಳೂರು, ದಕ್ಷಿಣ ಕನ್ನಡದ ಸುಳ್ಯ, ಉತ್ತರ ಕನ್ನಡದ ಭಟ್ಕಳ, ಮಂಕಿ ಹಾಗೂ ಕದ್ರಾ, ಉಡುಪಿಯ ಕುಂದಾಪುರದಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ.

    ಕಲ್ಲಿದ್ದಲು ಹಗರಣ: ಮಮತಾ ಬ್ಯಾನರ್ಜಿ ಅಳಿಯ, ಸೊಸೆಗೆ ಸಂಕಷ್ಟ- ‘ಇಡಿ’ಯಿಂದ ಸಮನ್ಸ್‌ ಜಾರಿ

    ‘ರೇಪ್‌ ಮಾಡೋ ಯೋಚ್ನೆ ಇರ್ಲಿಲ್ಲ… ಮೂರು ದಿನ ಇದೇ ಜಾಗದಲ್ಲಿ ನೋಡಿ ನಾಲ್ಕನೇ ದಿನ ಹೀಗೆ ಮಾಡಿದ್ವಿ’

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts