More

    ರಾಜೀವ್​ಗಾಂಧಿ ಆರೋಗ್ಯ ವಿವಿಯ ಕಾಲೇಜು ತೆರೆಯಲು ಡೇಟ್​ ಫಿಕ್ಸ್​

    ಬೆಂಗಳೂರು : ನವೆಂಬರ್ 17ರಿಂದ ಕಾಲೇಜುಗಳು ಆರಂಭವಾಗಲಿರುವುದಾಗಿ ಘೋಷಿಸಿರುವ ಬೆನ್ನಲ್ಲೇ ಇದೀಗ ರಾಜ್ಯದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿವಿಯ ಎಲ್ಲಾ ಕಾಲೇಜುಗಳನ್ನು ತೆರೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.

    ಈ ಕುರಿತು ಮಾಹಿತಿ ನೀಡಿರುವ ಸಚಿವ ಡಾ.ಕೆ.ಸುಧಾಕರ್ ಡಿಸೆಂಬರ್.1ರಿಂದ ರಾಜೀವ್ ಗಾಂಧಿ ಆರೋಗ್ಯ ವಿವಿಯ ಎಲ್ಲಾ ಕಾಲೇಜುಗಳನ್ನು ತೆರೆಯಲು ನಿರ್ಧರಿಸಲಾಗಿದೆ ಎಂದಿದ್ದಾರೆ. ಈ ಕುರಿತು ಅವರು ಟ್ವೀಟ್​ ಮೂಲಕ ಮಾಹಿತಿ ನೀಡಿದ್ದಾರೆ.

    ರಾಜೀವ್ ಗಾಂಧಿ ಆರೋಗ್ಯ ವಿವಿಯ ಎಲ್ಲಾ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಪ್ಯಾರಾ ಮೆಡಿಕಲ್, ನರ್ಸಿಂಗ್ ಮತ್ತು ಫಾರ್ಮಸಿ ಕಾಲೇಜುಗಳನ್ನು ಡಿಸೆಂಬರ್ 1ರಿಂದ ಪುನರಾರಂಭಿಸಲು ನಿರ್ಧರಿಸಲಾಗಿದೆ. ಈಗಾಗಲೇ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಕಾಲೇಜುಗಳ ಆಡಳಿತ ಮಂಡಳಿಗಳನ್ನು ಹಾಗೂ ವಿದ್ಯಾರ್ಥಿಗಳನ್ನು ವಿನಂತಿಸುತ್ತೇನೆ ಎಂದು ಟ್ವೀಟ್​ನಲ್ಲಿ ಹೇಳಿದ್ದಾರೆ.
    ಇದೇ ಬೆನ್ನಲ್ಲೇ ಮೆಟ್ರಿಕ್ ನಂತರದ ಹಾಸ್ಟೆಲ್​ಗಳನ್ನು ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

    ನವೆಂಬರ್ 17 ರಿಂದ ಪದವಿ ಕಾಲೇಜುಗಳು ಆರಂಭಕ್ಕೆ ಸಿದ್ದತೆ ನಡೆದಿದ್ದು, ಈ ನಡುವೆ ಮೆಟ್ರಿಕ್ ನಂತರದ ಹಾಸ್ಟೆಲ್​ಗಳನ್ನು ತೆರೆಯಲು ಆದೇಶ ಹೊರಡಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆ ನಿರ್ವಹಿಸುತ್ತಿರುವ ಹಾಸ್ಟೆಲ್ ಗಳನ್ನು ಕೋವಿಡ್ ನಿಯಮದ ಪ್ರಕಾರ ತೆರೆಯಲು ಸೂಚನೆ ನೀಡಲಾಗಿದೆ ಎನ್ನಲಾಗಿದೆ.

    ಒವೈಸಿ ಎಂಟ್ರಿ: ಮುಸ್ಲಿಂ ಮತದಾರರನ್ನು ಕಳೆದುಕೊಳ್ಳೋ ಟೆನ್ಷನ್​ನಲ್ಲಿ ದೀದಿ!

    ಸಿದ್ಧಗೊಂಡ ಒಬಾಮಾ ಆತ್ಮಚರಿತ್ರೆ- ರಾಹುಲ್​, ಸೋನಿಯಾ ಕುರಿತು ಏನಿದೆ ಗೊತ್ತಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts