More

    ಕೃಷಿ ಕಾಯ್ದೆ ರದ್ದಾದರೂ ಹೋರಾಟ ನಿಲ್ಲಿಸಲ್ಲ: ಪ್ರಧಾನಿ ಮನವಿಗೆ ಸದ್ಯ ಸ್ಪಂದಿಸಲ್ಲ- ರಾಕೇಶ್‌ ಟಿಕಾಯತ್‌

    ನವದೆಹಲಿ: ಭಾರಿ ವಿವಾದ ಸೃಷ್ಟಿಸಿದ್ದ ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದು, ರೈತರು ಪ್ರತಿಭಟನೆಯನ್ನು ವಾಪಸ್‌ ಪಡೆಯುವಂತೆ ಕೋರಿಕೊಂಡಿದ್ದಾರೆ. ಈ ಬಗ್ಗೆ ಹಲವೆಡೆಗಳಿಂದ ಭಾರಿ ಮೆಚ್ಚುಗೆ ವ್ಯಕ್ತವಾದರೂ ಪ್ರತಿಭಟನೆಯ ನೇತೃತ್ವ ವಹಿಸಿರುವ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಮಾತ್ರ ಸದ್ಯ ಪ್ರಧಾನಿಯ ಮನವಿಗೆ ಸ್ಪಂದಿಸಲ್ಲ ಎಂದಿದ್ದಾರೆ.

    ಕೃಷಿ ಕಾಯ್ದೆ ವಾಪಸ್‌ ಪಡೆಯುವುದಾಗಿ ಇದೀಗ ಮಾಡಿರುವುದು ಘೋಷಣೆಯಷ್ಟೇ. ಆದ್ದರಿಂದ ಪ್ರತಿಭಟನೆ ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ. ಇದು ಮೊದಲು ಸಂಸತ್ತಿನಲ್ಲಿ ರದ್ದು ಪಡಿಸಬೇಕಿದೆ. ಅಷ್ಟೇ ಅಲ್ಲದೇ, ಸರ್ಕಾರವು ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಬೇಕಿದೆ. ಆಗ ಮಾತ್ರ ಪ್ರತಿಭಟನೆ ಹಿಂದಕ್ಕೆ ಪಡೆಯಲಾಗುವುದು ಎಂದಿದ್ದಾರೆ.

    ಈ ಕುರಿತು ಅವರು ಟ್ವೀಟ್‌ ಮಾಡಿದ್ದು, ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ.ಸಂಸತ್ತಿನಲ್ಲಿ ಕೃಷಿ ಕಾನೂನುಗಳನ್ನು ರದ್ದುಪಡಿಸುವ ದಿನಕ್ಕಾಗಿ ನಾವು ಕಾಯುತ್ತೇವೆ. ಎಂಎಸ್‌ಪಿ ಜತೆಗೆ ರೈತರ ಇತರೆ ಸಮಸ್ಯೆಗಳ ಬಗ್ಗೆಯೂ ಸರ್ಕಾರ ಮಾತನಾಡಬೇಕು ಎಂದು ಹೇಳಿದ್ದಾರೆ.

    ಕೇಂದ್ರ ಸರ್ಕಾರದಿಂದ ಮೂರು ಕೃಷಿ ಕಾನೂನು ವಾಪಸ್​: ಪ್ರಧಾನಿ ಮೋದಿಯಿಂದ ಮಹತ್ವದ ಘೋಷಣೆ

    ಕೃಷಿ ಕಾಯ್ದೆಗಳನ್ನು ಹಿಂಪಡೆದ ಕೇಂದ್ರದ ನಿರ್ಧಾರಕ್ಕೆ ಪಕ್ಷಾತೀತ ಮೆಚ್ಚುಗೆ: ನ. 19 ದೇಶದ ರೈತರ ಗೆಲುವೆಂದ ಕಾಂಗ್ರೆಸ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts