More

    ನಿವೃತ್ತ ಮುಖ್ಯ ನ್ಯಾಯಮೂರ್ತಿ, ಮಾಜಿ ರಾಜ್ಯಪಾಲ, ಸಂವಿಧಾನ ತಜ್ಞ ರಾಮಾ ಜೋಯಿಸ್‌ ಇನ್ನಿಲ್ಲ

    ಬೆಂಗಳೂರು: ಎರಡು ರಾಜ್ಯಗಳ ರಾಜ್ಯಪಾಲರಾಗಿದ್ದ, ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾಗಿದ್ದ, ಆರ್‌ಎಸ್‌ಎಸ್‌ನ ಸ್ವಯಂ ಸೇವಕರಾಗಿದ್ದ ಎಂ. ರಾಮಾ ಜೋಯಿಸ್‌ ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

    ಸಂವಿಧಾನ ತಜ್ಞರೂ ಆಗಿದ್ದ ರಾಮಾ ಜೋಯಿಸ್‌ ಅವರಿಗೆ 89 ವರ್ಷ ವಯಸ್ಸಾಗಿತ್ತು. ಇಂದು ಬೆಳಗ್ಗೆ 7.30ರ ಸುಮಾರಿಗೆ ಇವರು ನಿಧನರಾಗಿದ್ದಾರೆ.
    1931ರ ಜುಲೈ 27ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಜನಿಸಿದ ರಾಮಾ ಜೋಯಿಸ್ ಅವರು ಬಾಲ್ಯದಿಂದಲೇ ಆರ್‌ಎಸ್‌ಎಸ್‌ ನಂಟು ಹೊಂದಿದವರು.

    ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಜಾರ್ಖಂಡ್ ಮತ್ತು ಬಿಹಾರ ರಾಜ್ಯಗಳ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ, ಕರ್ನಾಟಕದಿಂದ ರಾಜ್ಯಸಭೆಯ ಸದಸ್ಯರೂ ಆಗಿದ್ದರು. ಭಾರತೀಯ ಜನತಾ ಪಕ್ಷದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಸದ್ಯ ಸುಪ್ರೀಂಕೋರ್ಟ್‌ ವಕೀಲರಾಗಿಯೂ ಕೆಲಸ ನಿರ್ವಹಿಸುತ್ತಿದ್ದರು.

    ಹಲವು ಗಣ್ಯರು ರಾಮಾ ಜೋಯಿಸ್‌ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಇವರ ಸರ್ವೀಸ್ ಅಂಡರ್ ಸ್ಟೇಟ್ ಹಿಸ್ಟಾರಿಕಲ್ ಬ್ಯಾಟಲ್, ನೀಡ್ ಫಾರ್ ಅಮೆಂಡಿಂಗ್ ದಿ ಕಾನ್ಸ್‌ಟಿಟ್ಯೂಷನ್‌, ರಾಜ ಧಾರ್ಮ ವಿಥ್ ದಿ ಲೆಸೆನ್ಸ್ ಆಫ್ ರಾಜ ನೀತಿ ಸೇರಿದಂತೆ ಸಂವಿಧಾನಕ್ಕೆ ಸಂಬಂಧಿಸಿದಂತೆ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ.

    ಇಂದು ಸಂಜೆ 4 ಗಂಟೆಗೆ ಅಂತಿಮ ಸಂಸ್ಕಾರ ನಡೆಯಲಿದ್ದು, ರಾಜಾಜಿನಗರದ ಅವರ ನಿವಾಸದಲ್ಲಿ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ.

    ರಾಜ್ಯಕ್ಕೆ ಹೆಚ್ಚುವರಿ 750 ವೈದ್ಯಕೀಯ ಸೀಟು, 5 ಹೊಸ ಕಾಲೇಜು ಆರಂಭ

    ಟೂಲ್‌ಕಿಟ್‌ ಹಗರಣ ಬಯಲಾಗುತ್ತಿದ್ದಂತೆಯೇ ಹೆಚ್ಚಾಯ್ತು ‘ಮೋದಿಗೋಬ್ಯಾಕ್‌’ ಟ್ರೆಂಡ್‌- ಸಂಕಷ್ಟದಲ್ಲಿ ನಟಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts