ಆರ್​ಬಿಐ ಗವರ್ನರ್​ಗೆ ಕರೊನಾ: ಟ್ವಿಟರ್​ನಲ್ಲಿ ಮಾಹಿತಿ

RBI governor
Published on

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್​ಬಿಐ) ಗವರ್ನರ್​ ಶಕ್ತಿಕಾಂತ್ ದಾಸ್ ಅವರಿಗೆ ಕರೊನಾ ಸೋಂಕು ದೃಢಪಟ್ಟಿದೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ನನಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ಆದರೆ ಕರೊನಾ ಪಾಸಿಟಿವ್​ ಬಂದಿರುವ ಹಿನ್ನೆಲೆಯಲ್ಲಿ ನಾನೀಗ ಹೋಮ್​ ಐಸೋಲೇಷನ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಹೇಳಿದ್ದಾರೆ.

ಐಸೋಲೇಷನ್​ನಲ್ಲಿ ಇದ್ದುಕೊಂಡೇ ನಾನು ಪ್ರತಿದಿನ ಕಾರ್ಯ ನಿರ್ವಹಿಸುವುದಕ್ಕೆ ಶಕ್ತನಾಗಿದ್ದೇನೆ. ಆರ್ ಬಿಐಗೆ ಸಂಬಂಧಿಸಿದ ಕೆಲಸ ಕಾರ್ಯಗಳು ಎಂದಿನಂತೆ ನಡೆದುಕೊಂಡು ಹೋಗುತ್ತವೆ. ಅದರಲ್ಲಿ ಯಾವುದೇ ರೀತಿ ವ್ಯತ್ಯಾಸ ಆಗುವುದಿಲ್ಲ ಎಂದಿದ್ದಾರೆ.

ನಾನು ಪ್ರತ್ಯೇಕವಾಗಿದ್ದುಕೊಂಡೇ ಕಚೇರಿಯ ಕೆಲಸ-ಕಾರ್ಯಗಳನ್ನು ನಿರ್ವಹಿಸುತ್ತಿದ್ದೇನೆ. ವಿಡಿಯೋ ಕಾನ್ಫರೆನ್ಸ್​ ಮತ್ತು ದೂರವಾಣಿ ಮೂಲಕ ಆರ್​ಬಿಐ ಉಪ ಗವರ್ನರ್​ ಮತ್ತು ಉನ್ನತಾಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಕಾರ್ಯನಿರ್ವಹಿಸುತ್ತಿದ್ದೇನೆ ಎಂದಿದ್ದಾರೆ. ಕಚೇರಿಯ ಕೆಲಸ-ಕಾರ್ಯಗಳಿಗೆ ಅಡ್ಡಿಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಟ್ವೀಟ್​ ಮೂಲಕ ಮಾಹಿತಿ ನೀಡಿದ್ದಾರೆ.

ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲ ಎಚ್ಚರದಿಂದ ಇದೆ. ಕೂಡಲೇ ಕರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಶಕ್ತಿಕಾಂತ್​ ಮನವಿ ಮಾಡಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net