More

    ಬಿಗಿ ಬಂದೋಬಸ್ತ್‌ ನಡುವೆ ಇಂದು ಗಣರಾಜ್ಯೋತ್ಸವ- ಶುಭ ಕೋರಿದ ರಾಷ್ಟ್ರಪತಿ, ಪ್ರಧಾನಿ

    ನವದೆಹಲಿ: ಇಂದು ದೇಶಕ್ಕೆ 72ನೇ ಗಣರಾಜ್ಯೋತ್ಸವದ ಸಂಭ್ರಮ. ನಾಡಿನ ಜನರಿಗೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯದ ಟ್ವೀಟ್‌ ಮೂಲಕ ಶುಭ ಕೋರಿದ್ದಾರೆ.

    ರಾಜ್‌ಪಥ್‌ನಲ್ಲಿ ಪ್ರತಿವರ್ಷವೂ ಗಣರಾಜ್ಯೋತ್ಸವ ಅದ್ಧೂರಿಯಿಂದ ಆಚರಿಸಲಾಗುತ್ತದೆ. ಆದರೆ ಈ ಬಾರಿ ಕರೊನಾ ಹಿನ್ನೆಲೆಯಲ್ಲಿ ಸರಳವಾಗಿ ಉತ್ಸವವನ್ನು ಆಚರಿಸಲಾಗುತ್ತದೆ. ಲಕ್ಷಾಂತರ ಮಂದಿ ಸೇರಬೇಕಿದ್ದ ಈ ಕಾರ್ಯಕ್ರಮಕ್ಕೆ ಕೋವಿಡ್‌-19 ಅಡ್ಡ ಬಂದಿದ್ದು, 25 ಸಾವಿರ ಮಂದಿಗೆ ಅವಕಾಶ ಕಲ್ಪಿಸಲಾಗಿದೆ.

    ಅದೇ ಇನ್ನೊಂದೆಡೆ, ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ಸುಮಾರು ಎರಡು ತಿಂಗಳಿನಿಂದ ನಡೆಯುತ್ತಿರುವ ತೀವ್ರ ಸ್ವರೂಪದ ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿಯ ಸುತ್ತಮುತ್ತಲೂ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ರಾಜ್‌ಪಥ್‌ನಲ್ಲಿ ಸಾವಿರಾರು ಮಂದಿ ಸೇನಾ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

    ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುವವರಿಗೆ ಗಣರಾಜ್ಯೋತ್ಸವದಂದು ಪ್ರತಿವರ್ಷವೂ ರಾಷ್ಟ್ರಪತಿ ಪದಕ ನೀಡಲಾಗುತ್ತದೆ. 2021ನೇ ಸಾಲಿನ ರಾಷ್ಟ್ರಪತಿ ಪದಕಕ್ಕೆ ರಾಜ್ಯದ 19 ಪೊಲೀಸರು ಭಾಜನರಾಗಿದ್ದು, ಅವರಿಗೆ ಇಂದು ಪದಕ ಪ್ರದಾನ ಮಾಡಲಾಗುತ್ತದೆ.

    ನಿತ್ಯಭವಿಷ್ಯ| ಈ ರಾಶಿಯವರಿಗೆ ಮಾತಿನ ಸಾಮರ್ಥ್ಯವೇ ದಿವ್ಯೌಷಧ..

    ಇಂದಿನಿಂದ ದೇಶೀಯ ಟಿ20 ನಾಕೌಟ್ ಕಾದಾಟ, 8ರ ಘಟ್ಟದಲ್ಲಿ ಕರ್ನಾಟಕಕ್ಕೆ ಪಂಜಾಬ್ ಸವಾಲು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts