ರಾಬರ್ಟ್ ಚಿತ್ರದ ನಿರ್ಮಾಪಕನ ಕೊಲೆಗೆ ಸ್ಕೆಚ್‌ ಹಾಕಿದ್ದ ರೌಡಿ ಪೊಲೀಸ್‌ ಬಲೆಗೆ

umapathy1
ಚಿತ್ರ ನಿರ್ಮಾಪಕ ಉಮಾಪತಿ ಶ್ರೀನಿವಾಸ್‌
Published on

ಬೆಂಗಳೂರು: ರಾಬರ್ಟ್ ಚಿತ್ರದ ನಿರ್ಮಾಪಕ ಉಮಾಪತಿ ಶ್ರೀನಿವಾಸ್‌ ಅವರ ಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿ ಶೀಟರ್ ರಾಜೀವ್ ಅಲಿಯಾಸ್ ಕರಿಯ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ನೇಪಾಳ ಬಾರ್ಡರ್ ನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಕೆ.ಜೆ.ನಗರ ಇನ್ಸ್‌ಪೆಕ್ಟರ್‌ ಚೇತನ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಈತ ಸಿಕ್ಕಿಬಿದ್ದಿದ್ದಾನೆ.

ಬಾಂಬೆ ರವಿ ಗ್ಯಾಂಗ್‌ನಲ್ಲಿ ಗುರುತಿಸಿಕೊಂಡಿದ್ದ ರೌಡಿ ರಾಜೇಶ್ ಇದಾಗಲೇ ಇಟ್ಟಮಡು ಡಬ್ಬಲ್ ಮರ್ಡರ್ ಕೇಸ್ ನಲ್ಲಿ ಆರೋಪಿಯಾಗಿದ್ದಾನೆ. ರೌಡಿ ಬಾಂಬೆ ರವಿ ಜತೆ ಸೇರಿಕೊಂಡಿದ್ದ ಈತ, ಉಮಾಪತಿ ಹತ್ಯೆಗೆ ಸಂಚು ರೂಪಿಸಿದ್ದ. ಬಸವನಗುಡಿ ಮೆಟ್ರೋ ನಿಲ್ದಾಣದ ಬಳಿ ಟೀಟಿಯಲ್ಲಿದ್ದ ಕೆಲ ಆರೋಪಿಗಳನ್ನು ಬಂಧಿಸಿದ್ದ ಇನ್ಸ್ ಪೆಕ್ಟರ್ ಸುದರ್ಶನ್ ನೇತೃತ್ವದ ತಂಡ ದೊಡ್ಡ ಅನಾಹುತವನ್ನು ತಪ್ಪಿಸಿದ್ದರು. ಇದೀಗ ರಾಜೀವ್‌ ಸಿಕ್ಕಿಬಿದ್ದಿದ್ದಾನೆ.

ಹಿನ್ನೆಲೆ ಇಲ್ಲಿದೆ: ನಿರ್ಮಾಪಕ ಉಮಾಪತಿ ಹತ್ಯೆಗೆ ಸಂಚು: 7 ಆರೋಪಿಗಳ ಬಂಧನ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net