More

    ರೋಹಿಣಿ ಸಿಂಧೂರಿಗೆ ಎದುರಾಯ್ತು ಮತ್ತೊಂದು ಸಂಕಷ್ಟ: ಅಮಾನತಿಗೆ ಕೋರಿ ಕೇಸ್‌ ದಾಖಲು

    ನವದೆಹಲಿ: ಕಳೆದ ಮೇ 2ರಂದು ಚಾಮರಾಜನಗರದಲ್ಲಿ ನಡೆದಿರುವ ಆಕ್ಸಿಜನ್‌ ಕೊರತೆಯ ದುರಂತಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಲ್ಲಿ ಕೇಸ್‌ ದಾಖಲಾಗಿದ್ದು, ಇವರನ್ನು ಅಮಾನತು ಮಾಡಲು ಆದೇಶಿಸಿ ಎಂದು ಕೋರಲಾಗಿದೆ.

    ರೋಹಿಣಿ ಸಿಂಧೂರಿ ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ವೇಳೆ ಆಕ್ಸಿಜನ್ ಕೊರತೆಯಿಂದ ಚಾಮರಾಜನಗರದಲ್ಲಿ 35 ಮಂದಿ ಮೃತಪಟ್ಟಿರುವ ಘಟನೆಯ ತನಿಖೆಗೆ ಆದೇಶಿಸುವಂತೆ ಹಾಗೂ ಈ ಕೇಸ್‌ನಲ್ಲಿ ನಿರ್ಲಕ್ಷ್ಯ ವಹಿಸಿರುವ ಆರೋಪ ಹೊತ್ತ ರೋಹಿಣಿ ಅವರನ್ನು ಅಮಾನತು ಮಾಡಲು ಆದೇಶಿಸುವಂತೆ ಕೋರಿ ವಿಧಾನಮಂಡಲ ನಿವೃತ್ತ ಭದ್ರತಾ ಅಧಿಕ್ಷಕ ಎಂ.ಎನ್ ಪಿಳ್ಳಪ್ಪ ದೂರು ದಾಖಲಿಸಿದ್ದಾರೆ.

    ಇಷ್ಟು ಮಂದಿ ಘಟನೆಯಲ್ಲಿ ಮೃತಪಟ್ಟರೂ ವರ್ಗಾವಣೆ ಹೊರತುಪಡಿಸಿ ಇನ್ಯಾವುದೇ ಕ್ರಮಗಳನ್ನು ರೋಹಿಣಿ ಅವರ ವಿರುದ್ಧ ತೆಗೆದುಕೊಂಡಿಲ್ಲ. ಅವರ ತಪ್ಪಿಸ್ಥರಾಗಿದ್ದರೂ ಏನೂ ಕ್ರಮ ತೆಗೆದುಕೊಂಡಿಲ್ಲ. ಅವರ ವಿರುದ್ಧ ಅಕ್ರಮ ಈಜುಕೊಳ ನಿರ್ಮಾಣ, ತಿರುಪತಿಯಲ್ಲಿದ್ದ ಮೈಸೂರು ಮಹಾರಾಜರ ಭೂಮಿ ಆಂಧ್ರಪ್ರದೇಶ ಸರ್ಕಾರಕ್ಕೆ ಹಸ್ತಾಂತರ ಸೇರಿ ಹಲವು ಆರೋಪಗಳಿವೆ. ಎಲ್ಲವುಗಳ ಬಗ್ಗೆ ತನಿಖೆ ಆಗಬೇಕಿದೆ ಎಂದು ಪಿಳ್ಳಪ್ಪ ಅವರು ಅರ್ಜಿಯಲ್ಲಿ ಹೇಳಿದ್ದಾರೆ.

    ಮೇ 2ರ ಮಧ್ಯರಾತ್ರಿ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಮಸ್ಯೆ ಉಂಟಾಗಿತ್ತು. ಅದರ ಪರಿಣಾಮ 24 ಜನ ಮೃತಪಟ್ಟಿದ್ದಾರೆ ಎನ್ನಲಾಗಿದ್ದರೂ ನಂತರ ನ್ಯಾ.ಎ.ಎನ್.ವೇಣುಗೋಪಾಲಗೌಡ ನೇತೃತ್ವದ ಸಮಿತಿ ಹೈಕೋರ್ಟ್​ಗೆ ಸಲ್ಲಿಸಿದ ವರದಿಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಮೃತಪಟ್ಟವರು 24 ಜನರಲ್ಲ, 36 ಜನರು ಎಂದು ಉಲ್ಲೇಖಿಸಲಾಗಿತ್ತು. ಈ ಕೇಸ್‌ಗೆ ಸಂಬಂಧಿಸಿದಂತೆ ರೋಹಿಣಿ ಅವರ ವಿರುದ್ಧ ಅಪಾರ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಅವರನ್ನು ರೋಹಿಣಿ ಸಿಂಧೂರಿ ಅವರನ್ನು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರನ್ನಾಗಿ ನೇಮಿಸಿ ವರ್ಗಾವಣೆ ಮಾಡಲಾಗಿದೆ.

    ಏಳು ಮಕ್ಕಳ ತಂದೆಯ ಪ್ರೀತಿಗೆ ಸಿಲುಕಿದ 19ರ ಯುವತಿ! ಗಂಡ ಬೇಡ ಇವನೇ ಬೇಕು ಎಂದು ಪಟ್ಟು ಹಿಡಿದು ಕೋರ್ಟ್‌ ಮೊರೆ

    ನನ್ನ ನಗ್ನ, ಕಾಮಪ್ರಚೋದಕ ವಿಡಿಯೋ ನೋಡಿ ಶಿಲ್ಪಾ ಖುಷಿ ಪಟ್ಟಿದ್ರು: ತನಿಖೆಯಲ್ಲಿ ನಟಿಯ ಸ್ಫೋಟಕ ಹೇಳಿಕೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts