More

    ‘ಆರ್​ಆರ್​ನಗರದ್ದು ಆಘಾತ, ಶಿರಾ ರಿಸಲ್ಟಂತೂ ಅಚ್ಚರಿ- ಸೋಲಿನ ಹೊಣೆ ನಾನೇ ಹೊರುವೆ’

    ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರ ಮತ್ತು ಶಿರಾ ಉಪಚುನಾವಣೆಯಲ್ಲಿ ಸೋಲು ಅನುಭವಿಸಿದ ನಂತರ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರು, ಎರಡು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮತದಾರ ಕೊಟ್ಟ ತೀರ್ಪನ್ನು ನಾವು ಗೌರವಯುತವಾಗಿ ಒಪ್ಪುತ್ತೇವೆ. ಪಕ್ಷದ ಅಧ್ಯಕ್ಷನಾಗಿ ಈ ಸೋಲಿನ ಹೊಣೆ ನಾನು ಹೊರುತ್ತೇನೆಯೇ ಹೊರತು, ಬೇರೆಯವರ ಮೇಲೆ ಹಾಕುವುದಿಲ್ಲ ಎಂದಿದ್ದಾರೆ.

    ರಾಜರಾಜೇಶ್ವರಿ ನಗರದಲ್ಲಿ ಇಷ್ಟು ಅಂತರದ ಸೋಲನ್ನು ನಿರೀಕ್ಷೆ ಮಾಡಿರಲಿಲ್ಲ. ಈ ಕ್ಷೇತ್ರದಲ್ಲಿ ತೀವ್ರ ಪೈಪೋಟಿಯಿಂದ ಕೆಲವು ಸಾವಿರ ಮತಗಳ ಅಂತರದಲ್ಲಿ ಫಲಿತಾಂಶ ಬರಬಹುದು ಎಂದು ಭಾವಿಸಿದ್ದೆ. ಇನ್ನು ಶಿರಾದಲ್ಲಿನ ಲೆಕ್ಕಾಚಾರ ಪೂರ್ಣವಾಗಿ ತಪ್ಪಾಗಿ ಹೋಗಿದೆ. ಅಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ ಎಂದು ನಮ್ಮ ಪಕ್ಷದ ಎಲ್ಲ ಮುಖಂಡರು ನಿರೀಕ್ಷಿಸಿದ್ದೆವು. ಅಲ್ಲಿ ಬಿಜೆಪಿಗೆ ಹೊಸದಾಗಿ ಅಷ್ಟು ಮತ ಹೋಗಿರುವುದು ಅಚ್ಚರಿ ತಂದಿದೆ ಎಂದರು.

    ಇದನ್ನೂ ಓದಿ: ‘ಹಿಂದೊಮ್ಮೆ ಎರಡೇ ಸೀಟು ಬಂದಿತ್ತು- ನಂತರ ಸಿಎಂ, ಪಿಎಂ ಸ್ಥಾನ ಸಿಕ್ಕಿತು, ನಿರಾಶರಾಗಬೇಡಿ’

    ಮುಂದಿನ ದಿನಗಳಲ್ಲಿ ಪಕ್ಷ ಸಂಘಟಿಸಿ ಸರ್ಕಾರದ ವೈಫಲ್ಯದ ವಿರುದ್ಧ ಹೋರಾಟ ಮುಂದುವರಿಸುತ್ತೇವೆ. ಒಳ್ಳೆಯ ಅಭ್ಯರ್ಥಿಗೆ ಜನ ಕೂಡ ಸಹಕಾರ ನೀಡಿದ್ದಾರೆ. ಕುಸುಮಾ ಅವರು ಉತ್ತಮ ಹೋರಾಟ ಮಾಡಿದ್ದಾರೆ. ನಮಗೆ ಸಿಕ್ಕಿರುವ ಮತ ಕೇವಲ ನಮ್ಮ ಪಕ್ಷದ ಮತ ಮಾತ್ರ ಅಲ್ಲ. ಬೇರೆ ಪಕ್ಷದ ಮತದಾರರು ಮತ ಹಾಕಿದ್ದಾರೆ. ಅವರು ಕೊಟ್ಟ ತೀರ್ಪನ್ನು ನಾವು ಒಪ್ಪುತ್ತೇವೆ ಎಂದರು.

    ಕೆಪಿಸಿಸಿ ಅಧ್ಯಕ್ಷರಾದ ನಂತರ ನಡೆದ ಮೊದಲ ಚುನಾವಣೆಯಲ್ಲಿ ಸೋಲಾಗಿರುವುದು ನೋವಾಗಿದೆ. 1985ರಲ್ಲಿ ಮೊದಲು ಸ್ಪರ್ಧಿಸಿದಾಗ ಸೋತಿದ್ದೆ. ನಂತರ ಗೆದ್ದುಕೊಂಡು ಬಂದಿದ್ದೇನೆ. ಹೀಗಾಗಿ ಸೋಲೇ ಗೆಲುವಿನ ಮೆಟ್ಟಿಲು ಎಂಬುದರ ಮೇಲೆ ನಂಬಿಕೆ ಇಟ್ಟುಕೊಂಡಿದ್ದೇನೆ ಎಂದರು.

    ಈ ಚುನಾವಣೆಯಲ್ಲಿ ಸೋತಿದ್ದೇವೆ ಎಂದು ನಾನಾಗಲಿ, ಪಕ್ಷವಾಗಲಿ ಹಿಂಜರಿಯುವ ಅಗತ್ಯವಿಲ್ಲ. ಉಪಚುನಾವಣೆಯಲ್ಲಿ ಅಧಿಕಾರದಲ್ಲಿರುವ ಪಕ್ಷಕ್ಕೆ ಶೇ.15ರಷ್ಟು ಅನುಕೂಲವಾಗುವ ಅನುಭವ ನಮಗಿದೆ. ನಾವೂ ಹಿಂದೆ ಬಳ್ಳಾರಿ, ಗುಂಡ್ಲುಪೇಟೆ, ನಂಜನಗೂಡು ಉಪಚುನಾವಣೆಯಲ್ಲಿ ಗೆದ್ದರೂ ನಂತರ ಚುನಾವಣೆಯಲ್ಲಿ ಸೋತಿದ್ದೆವು. ಈ ಚುನಾವಣೆಯಲ್ಲಿ ನಮ್ಮ ಕ್ಷೇತ್ರದಲ್ಲಿರುವ ಕಾರ್ಯಕರ್ತರು ಹಾಗೂ ರಾಜ್ಯದ ಕಾರ್ಯಕರ್ತರು ತಮ್ಮ ಶಕ್ತಿ ಮೀರಿ ಪಕ್ಷದ ಅಭ್ಯರ್ಥಿ ಗೆಲುವಿಗಾಗಿ ಶ್ರಮಿಸಿದ್ದಾರೆ ಎಂದು ಡಿ.ಕೆ.ಶಿವಕುಮಾರ್​ ಹೇಳಿದರು.

    ಶಿಕ್ಷಕರ, ಪದವೀಧರರ ಕ್ಷೇತ್ರದಲ್ಲೂ ಬಿಜೆಪಿ ಭರ್ಜರಿ ಮುನ್ನಡೆ- ಪುಟ್ಟಣ್ಣ ಗೆಲುವು

    ಇವಿಎಂ ಅಸಲಿಯತ್ತು: ಕಾಂಗ್ರೆಸ್​ ಸಂಸದ ಕಾರ್ತಿ ಚಿದಂಬರಂ ತಮ್ಮ ಪಕ್ಷದವರಿಗೆ ಹೇಳಿದ್ದೇನು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts