ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ಕನಸು ನುಚ್ಚುನೂರು: 8500 ಹುದ್ದೆ ರದ್ದು ಮಾಡಿದ ಎಸ್​ಬಿಐ

SBI
ಸಾಂದರ್ಭಿಕ ಚಿತ್ರ
Published on

ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಪ್ರೆಂಟಿಸ್​ ಆಗಿ ಸೇವೆ ಸಲ್ಲಿಸಲು ಬಯಸಿ ಅರ್ಜಿ ಸಲ್ಲಿಸಿರುವ ಉದ್ಯೋಗಾಕಾಂಕ್ಷಿಗಳಿಗೆ ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ ಬಿಗ್​ ಶಾಕ್​ ನೀಡಿದೆ. ಕಳೆದ ನವೆಂಬರ್ 20ರಂದು 8500 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಕರೆದಿದ್ದ ಅರ್ಜಿಯನ್ನು ರದ್ದುಗೊಳಿಸಿದೆ. ಈ ಮೂಲಕ ಲಕ್ಷಾಂತರ ಅಭ್ಯರ್ಥಿಗಳ ಕನಸು ನುಚ್ಚುನೂರಾಗಿದೆ.
ಅನಿವಾರ್ಯ ಕಾರಣಗಳಿಂದ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದ್ದು, ಅಭ್ಯರ್ಥಿಗಳು ಸಂದಾಯ ಮಾಡಿರುವ ಶುಲ್ಕವನ್ನು ಹಿಂದಿರುಗಿಸಲಾಗುತ್ತದೆ ಎಂಬುದಾಗಿ ಎಸ್​ಬಿಐ ಹೇಳಿದೆ. ಆದರೆ ಈ ಶುಲ್ಕ ವಾಪಸ್​ ಹೇಗೆ ನೀಡುತ್ತದೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ.

ಬ್ಯಾಂಕ್ ಹಣವನ್ನು ಅಭ್ಯರ್ಥಿಗಳ ಖಾತೆಗೆ ಜಮಾ ಆಗಬಹುದು ಇಲ್ಲವೇ ನಿಗದಿತ ನಮೂನೆ ಅರ್ಜಿಯನ್ನು ಅಭ್ಯರ್ಥಿಗಳು ಭರ್ತಿ ಮಾಡಿ ಸಲ್ಲಿಸಬೇಕಾಗಬಹುದು. ಈ ಬಗ್ಗೆ ಮುಂದಿನ ದಿನಗಳಲ್ಲಿ ಬ್ಯಾಂಕ್​ ತಿಳಿಸಲಿದೆ.

ಆದರೆ ಇದೇ ವೇಳೆ ಹೊಸದಾಗಿ 6100 ಹುದ್ದೆಗಳ ನೇಮಕಾತಿಗೆ ಎಸ್​ಬಿಐ ಹೊಸದಾಗಿ ಅರ್ಜಿ ಕರೆದಿದೆ. ಈ ಅರ್ಜಿಯಲ್ಲಿ ಕೆಲವೊಂದು ಬದಲಾವಣೆ ಮಾಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net