ರೈತರ ಮಕ್ಕಳಿಗೆ ಸರ್ಕಾರದಿಂದ ಭರಪೂರ ಶಿಷ್ಯವೇತನ: ಇದರ ಫುಲ್‌ ಡಿಟೇಲ್ಸ್‌ ಇಲ್ಲಿದೆ.

bommai1
Published on

ಬೆಂಗಳೂರು : ಬಸವರಾಜ ಬೊಮ್ಮಾಯಿ ಅವರು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ವೇಳೆ ತಿಳಿಸಿದಂತೆಯೇ ರೈತರ ಮಕ್ಕಳಿಗೆ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶಿಷ್ಯವೇತನವನ್ನು ಜಾರಿ ಗೊಳಿಸಿದ್ದಾರೆ.

ಈ ಕುರಿತು ಅಧಿಕೃತ ಆದೇಶ ಹೊರಬಿದ್ದಿದೆ. ಕೃಷಿ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ರಫೀ ಅಹಮದ್ ಎಂ.ಎಸ್ ನಡವಳಿಗಳನ್ನು ಹೊರಡಿಸಿದ್ದಾರೆ. ಸಚಿವ ಸಂಪುಟದಲ್ಲಿ ತೆಗೆದುಕೊಂಡಿರುವ ನಿರ್ಣಯದಂತೆ ಈ ಹೊಸ ಶಿಷ್ಯವೇತನ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದಿದ್ದಾರೆ.

ಇದರ ಸಂಪೂರ್ಣ ಡಿಟೇಲ್ಸ್‌ ಹೀಗಿದೆ:

ರೈತರ ಮಕ್ಕಳಿಗೆ ಯಾವ ಕೋರ್ಸ್ ಗೆ ಎಷ್ಟು ಹೊಸ ಶಿಷ್ಯವೇತನ.?

* ಪದವಿಯ ಮುಂಚೆ ಪಿಯುಸಿ, ಐಟಿಐ, ಡಿಪ್ಲೊಮಾ - ವಿದ್ಯಾರ್ಥಿಗಳಿಗೆ ರೂ.2,500, ವಿದ್ಯಾರ್ಥಿನಿಯರಿಗೆ ರೂ.3,000

* ಎಲ್ಲಾ ಬಿಎ, ಬಿಎಸ್ಸಿ, ಬಿಕಾಂ ಇತ್ಯಾದಿ ಹಾಗೂ ಎಂಬಿಬಿಎಸ್, ಬಿಇ, ಬಿಟೆಕ್ ಮತ್ತು ವೃತ್ತಿಪರ ಕೋರ್ಸ್ ಹೊರತುಪಡಿಸಿ - ವಿದ್ಯಾರ್ಥಿಗಳಿಗೆ ರೂ.5,000. ವಿದ್ಯಾರ್ಥಿನಿಯರಿಗೆ ರೂ.5,500

* ಎಲ್‌ಎಲ್‌ಬಿ, ಪ್ಯಾರಾ ಮೆಡಿಕಲ್, ಬಿ.ಫಾರ್ಮ್, ನರ್ಸಿಂಗ್ ಇತ್ಯಾದಿ ವೃತ್ತಿಪರ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ ರೂ.7,500, ವಿದ್ಯಾರ್ಥಿನಿಯರಿಗೆ ರೂ.8,000

* ಎಂಬಿಬಿಎಸ್, ಬಿಇ, ಬಿಟೆಕ್ ಮತ್ತು ಎಲ್ಲಾ ಸ್ನಾತಕೋತ್ತರ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ ರೂ.10,000. ವಿದ್ಯಾರ್ಥಿನಿಯರಿಗೆ ರೂ.11,000

ಷರತ್ತುಗಳು ಹೀಗಿವೆ:

* ವಿದ್ಯಾರ್ಥಿಗಳು ರೈತರ ಮಕ್ಕಳಾಗಿದ್ದು, ಕರ್ನಾಟಕ ರಾಜ್ಯದ ಅನುದಾನದಿಂದ ಪಾವತಿಸುವಂತ ಒಂದು ಶಿಷ್ಯವೇತನಕ್ಕೆ ಮಾತ್ರ ಅರ್ಹರಾಗುತ್ತಾರೆ. ಆದರೆ ಮೆರಿಟ್, ಅರ್ಹತಾ ಪರೀಕ್ಷೆ, ಶೈಕ್ಷಣಿಕ ಪರೀಕ್ಷೆಗಳಲ್ಲಿ ರ್ಯಾಂಕ್‌ ಇತ್ಯಾದಿಗಳ ಆಧಾರದ ಮೇಲೆ ಪಡೆಯುವ ಶಿಷ್ಯವೇತನ, ಪ್ರಶಸ್ತಿ, ಪ್ರತಿಫಲ, ಇವುಗಳನ್ನು ರೈತರ ಮಕ್ಕಳು ಪಡೆದಿದ್ದರೂ, ಈ ಶಿಷ್ಯವೇತನವನ್ನು ಪಡೆಯಲು ಅರ್ಹರಾಗಿರುತ್ತಾರೆ.

* ರೈತರ ಮಕ್ಕಳ ತಂದೆ-ತಾಯಿ ಇಬ್ಬರು ಕೃಷಿ ಜಮೀನಿನ ಒಡೆಯರಾಗಿದ್ದರೇ, ಈ ಯೋಜನೆಯಲ್ಲಿ ಒಂದು ಶಿಷ್ಯವೇತನಕ್ಕೆ ಮಾತ್ರ ರೈತರ ಮಕ್ಕಳು ಅರ್ಹರಾಗಿರುತ್ತಾರೆ.

* ಈ ಶಿಷ್ಯವೇತನವು ಶಿಕ್ಷಣದ ಯಾವುದೇ ಕೋರ್ಸಿನ ಸೆಮಿಷ್ಟರ್, ಶೈಕ್ಷಣಿಕ ವರ್ಷಗಳಿಗೆ ಮಿತಿಯಾಗಿರತ್ಕದ್ದು.

* ಕೋರ್ಸ್‌ನ ಸೆಮಿಸ್ಟರ್ ನಲ್ಲಿ, ಶೈಕ್ಷಣಿಕ ವರ್ಷದಲ್ಲಿ ಅನುತ್ತೀರ್ಣ ಹೊಂದಿ, ಪುನಹ ಆ ಸೆಮಿಸ್ಟರ್, ಶೈಕ್ಷಣಿಕ ವರ್ಷದಲ್ಲಿ ವಿದ್ಯಾಭ್ಯಾಸದ ಪುನರಾವರ್ತನೆಯಾದರೇ, ( ಪುನಃ ಪರೀಕ್ಷೆ ತೆಗೆದುಕೊಂಡರೇ ) ವಿದ್ಯಾರ್ಥಿಗಳು ಶಿಕ್ಷವೇತನವನ್ನು ಪಡೆಯಲು ಅರ್ಹರಾಗಿರುವುದಿಲ್ಲ.

* ಈ ಶಿಷ್ಯವೇತನವನ್ನು ಯಾವುದಾದರೂ ಒಂದು ವಿಧದ ಕೋರ್ಸ್‌ಗೆ ನೀಡಲಾಗುವುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net