More

    ದ್ವಿತೀಯ ಪಿಯುಸಿ ಪರೀಕ್ಷೆಗೆ ರೆಡಿಯಾಗಿ- ಇಲ್ಲಿದೆ ನೋಡಿ 42 ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆ

    ಬೆಂಗಳೂರು: 2021-22 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡುಗಡೆ ಮಾಡಲಾಗಿದೆ. ಈ ಕುರಿತು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

    ಒಟ್ಟು 42 ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡುಗಡೆ ಮಾಡಲಾಗಿದೆ. ಈ ಪ್ರಶ್ನೆ ಪತ್ರಿಕೆಯನ್ನು ಡೌನ್‌ಲೋಡ್ ಮಾಡಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಲಿಂಕ್‌ ಕೂಡ ನೀಡಲಾಗಿದೆ.

    ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯನ್ನು ಏಪ್ರಿಲ್ 16 ರಿಂದ ಮೇ.4ರ ವರೆಗೆ ‌ನಡೆಸುವ ಬಗ್ಗೆ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

    ಸಚಿವ ನಾಗೇಶ್‌ ಅವರು ಮಾಡಿರುವ ಈ ಕೆಳಗಿನ ಟ್ವೀಟ್‌ನಲ್ಲಿ ಲಿಂಕ್‌ ಇದ್ದು. ಅದನ್ನು ಕ್ಲಿಕ್ಕಿಸಿದರೆ 42 ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳು ತೆರೆದುಕೊಳ್ಳುತ್ತವೆ. ಪ್ರಶ್ನೆ ಪತ್ರಿಕೆಗಳ ಲಿಂಕ್‌ಗಾಗಿ  ಇಲ್ಲಿಯೂ ಕ್ಲಿಕ್ಕಿಸಬಹುದು. https://bit.ly/3HoUY9K

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts