More

    ಹಿಂದೆ ಮೈಸೂರಿಗೆ ಬಂದಾಗ ಗೇಲಿ ಮಾಡಿದ್ದರು, ಈಗ ಸಾಧಿಸಿ ತೋರಿಸಿದ್ದೇನೆ- ಶೋಭಾ

    ಮೈಸೂರು: ಪ್ರಧಾನಿ ಮೋದಿ ದೇಶದ ರೈತನ ಮಗಳೊಬ್ಬಳಿಗೆ ಗುರುತಿಸಿ ಕೃಷಿ ಖಾತೆ ನೀಡಿದ್ದಾರೆ. ಹಳ್ಳಿಯಲ್ಲಿ ನಾನು ಓದುವಾಗ ಕರೆಂಟ್ ರಸ್ತೆ ಕೂಡ ಇರಲಿಲ್ಲ. ಅಂತಹ ಹಳ್ಳಿಯಿಂದ ಬಂದವಳಿಗೆ ಇಂತಹ ಖಾತೆ ಕೊಟ್ಟು ಕೆಲಸ ಮಾಡಲು ಅನುಕೂಲ ಮಾಡಿಕೊಟ್ಟಿದ್ದಾರೆ. ನಾವು ದೇಶದ ಶೇಕಡ 80ರಷ್ಟು ರೈತರ ಹಿತ ಕಾಯಬೇಕಿದೆ. ಅವರು ಬೇರೆ ಬೇರೆ ಕೆಲಸಗಳಿಗೆ ಹೋಗದೆ ಕೃಷಿಯಲ್ಲೇ ಉಳಿಯುವಂತೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಇಲಾಖೆಯಿಂದ ಕಾರ್ಯಯೋಜನೆ ರೂಪಿಸುತ್ತೇನೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

    ಮೈಸೂರಿಗೆ ಬಂದಿದ್ದ ಅವರು ಮಾಧ್ಯಮದವರ ಬಳಿ ಮಾತನಾಡುತ್ತಿದ್ದರು. ಅತಿ ಹೆಚ್ಚು ಹಿಂದುಳಿದ ವರ್ಗದವರು, ಮಹಿಳೆಯರು ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿದ್ದಾರೆ. ಕೃಷಿ ಇಲಾಖೆಯನ್ನು ಅಧ್ಯಯನ ಮಾಡಲು ಮೂರು ತಿಂಗಳ ಕಾಲಾವಕಾಶ ಅವಶ್ಯಕತೆ ಇದೆ. ಅದನ್ನು ಮಾಡಿ ತೋರಿಸುತ್ತೇನೆ. ಈ ಮೊದಲಿನ ಸರ್ಕಾರಗಳು ಕೃಷಿಯನ್ನು ಕಡೆಗಣಿಸಿದ್ದವು. ಆದರೆ ಮೋದಿ ಅವರು ಪ್ರಧಾನಿಯಾದ ಬಳಿಕ ಕೃಷಿ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಕೇಂದ್ರ ಬಜೆಟ್ ನಲ್ಲಿ ಒಂದು ಲಕ್ಷ ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತವನ್ನು ಕೃಷಿಗೆ ಮೀಸಲಿಡಲಾಗಿದೆ. ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿ ರಫ್ತಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ನಾವು ಸಾಗುತ್ತಿದ್ದೇವೆ. ಕರೊನಾ ಲಾಕ್ ಡೌನ್ ಜಾರಿಯಲ್ಲಿದ್ದ ಸಮಯದಲ್ಲೂ ದಾಖಲೆ ಪ್ರಮಾಣದಲ್ಲಿ ಕೃಷಿ ಉತ್ಪನ್ನಗಳ ಸಂಗ್ರಹವಾಗಿದೆ ಎಂದು ಶೋಭಾ.

    ಇದೆ ವೇಳೆ ಕೃಷಿ ತಿದ್ದುಪಡಿ ಕಾಯ್ದೆಗಳಿಗೆ ವಿರೋಧ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ನಿದ್ದೆ ಮಾಡುವವರನ್ನು ಬೇಕಾದರೆ ನಾವು ಎಚ್ಚರಿಸಬಹುದು. ಆದರೆ ನಿದ್ದೆ ಮಾಡಿದಂತೆ ನಟಿಸುವವರನ್ನು ಎಚ್ಚರಿಸುವುದಕ್ಕೆ ಆಗಲ್ಲ. ರೈತರಿಗೆ ಕೃಷಿ ಕಾಯ್ದೆ ಉಪಯೋಗದ ಬಗ್ಗೆ ತಿಳಿ ಹೇಳಬಹುದು. ಆದರೆ ರೈತರಂತೆ ನಟಿಸುವವರನ್ನು ಮನವೊಲಿಸಲು ಆಗಲ್ಲ. ದೆಹಲಿಯಲ್ಲಿ ಕೇವಲ ದಲ್ಲಾಳಿಗಳ ಹೋರಾಟವಾಗಿ ಉಳಿದಿದೆ. ಈ ಕಾಯ್ದೆಗಳಿಂದ ರೈತರ ಬೆಳೆ ಮಾರಾಟಕ್ಕೆ ಅನುಕೂಲವಾಗಲಿದೆ. ರೈತರ ಹೊಲಕ್ಕೆ ಮುಂಬೈನಿಂದ ಟ್ರಕ್ ಬಂದು ನಿಲ್ಲುತ್ತದೆ ಎಂದರು.

    ಈ ವರ್ಷ ಆಷಾಢ ಮಾಸದಲ್ಲಿ ಚಾಮುಂಡಿ ಬೆಟ್ಟ ಹತ್ತಲು ಆಗದ ಬಗ್ಗೆ ಹೇಳಿದ ಶೋಭಾ, ನಾನು ಪ್ರತಿ ವರ್ಷ ಆಷಾಢ ಮಾಸದಲ್ಲಿ ಚಾಮುಂಡಿ ಬೆಟ್ಟದ ಮೆಟ್ಟಿಲುಗಳನ್ನು ಹತ್ತುತ್ತಿದ್ದೆ. ಈ ವರ್ಷ ಸಚಿವರೆಲ್ಲಾ ದೆಹಲಿಯಲ್ಲೇ ಇರಬೇಕು ಎಂಬ ಆದೇಶ ಬಂದಿತ್ತು. ಈ ಕಾರಣ ಆಷಾಢಕ್ಕೆ ಬರಲು ಸಾಧ್ಯ ಆಗಿರಲಿಲ್ಲ. ಮುಂದೆ ನವರಾತ್ರಿಗೆ ಬಂದು ಮೆಟ್ಟಿಲು ಹತ್ತುತ್ತೇನೆ. ತಾಯಿ ಚಾಮುಂಡೇಶ್ವರಿ ನನಗೆ ಎಲ್ಲಾ ಬಗೆಯ ಶಕ್ತಿ ತುಂಬಿದ್ದಾಳೆ. ನಾನು ಮೊದಲು ಮೈಸೂರಿಗೆ ಬಂದಾಗ ಎಲ್ಲರೂ ಗೇಲಿ ಮಾಡಿದ್ದರು. ದಸರಾ ಆಚರಣೆ ಮಾಡೋದು ಗೊತ್ತಿಲ್ಲ ಅಂತ ಗೇಲಿ ಮಾಡಿದ್ದರು. ಆದರೆ ತಾಯಿ ಕೃಪೆಯಿಂದ ಅದನ್ನು ಮಾಡಿ ತೋರಿಸಿದ್ದೇನೆ ಎಂದು ಸಚಿವೆ ತಿಳಿಸಿದರು.

    ‘ಕಚೇರಿ ಸುತ್ತುವರೆದಿದ್ದರು, ಬುರ್ಖಾ ಹಾಕದವರನ್ನು ಕೊಲ್ಲುತ್ತಿದ್ದರು, ಜೀವ ಕೈಯಲ್ಲಿ ಹಿಡಿದು ಓಡಿದೆ…’

    ನೀರಜ್​ ತರಬೇತಿಗೆ ಏಳು ಕೋಟಿ ರೂ. ವೆಚ್ಚ: ಪ್ರಶ್ನೆ ಕೇಳುವವರಿಗೆ ಕೇಂದ್ರ ಬಿಚ್ಚಿಟ್ಟ ಲೆಕ್ಕ ಇಲ್ಲಿದೆ ನೋಡಿ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts