

ಹರಿಯಾಣ: ಕಾಲೇಜಿನ ಕುಸ್ತಿ ಅಖಾಡಾದಲ್ಲಿ ಗುಂಡಿನ ದಾಳಿ ನಡೆದಿದ್ದು, ಐವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಹರಿಯಾಣದಲ್ಲಿ ನಡೆದಿದೆ. ಈ ಘಟನೆಯಲ್ಲಿ ಅನೇಕ ಮಂದಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.
ಕುಸ್ತಿ ಅಖಾಡಾ ನಡೆಯುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಗುಂಡಿನ ದಾಳಿ ನಡೆಸಲಾಗಿದೆ. ಇವರು ಏತಕ್ಕಾಗಿ ದಾಳಿ ನಡೆಸಿದ್ದಾರೆ, ನಡೆಸಿದವರು ಯಾರ ಎಂಬ ಬಗ್ಗೆ ಇದುವರೆಗೆ ಮಾಹಿತಿ ಪತ್ತೆಯಾಗಿಲ್ಲ.
ಈ ಕುರಿತಂತೆ ಮಾತನಾಡಿದ ಪೊಲೀಸರು, ಗುಂಡಿನ ದಾಳಿಯಿಂದ ಮೃತಪಟ್ಟವರಲ್ಲಿ ಓರ್ವ ಕುಸ್ತಿ ತರಬೇತುದಾರನಾಗಿದ್ದು, ಕೆಲವರು ಗಾಯಗೊಂಡಿದ್ದಾರೆ. ಅವರಲ್ಲಿ ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ. ಅಲ್ಲದೆ ಘಟನೆಯಲ್ಲಿ 3 ವರ್ಷದ ಬಾಲಕ ಕೂಡ ಗಾಯಗೊಂಡಿದ್ದಾನೆ ಎಂದು ತಿಳಿಸಿದ್ದಾರೆ.
ಈ ಕೃತ್ಯ ಎಸಗಿದವರು ಯಾರು ಎಂಬ ಕುರಿತು ತನಿಖೆ ನಡೆಸಲು ವಿಶೇಷ ತಂಡವೊಂದನ್ನು ರಚಿಸಲಾಗಿದೆ.ಘಟನೆ ಕುರಿತಂತೆ ಮಾಹಿತಿ ಕಲೆ ಹಾಕುತ್ತಿದ್ದೇವೆ. ಸದ್ಯ ಗುಂಡು ಹಾರಿಸಿದವರು ಯಾರು ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ದೊರೆತಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಶರ್ಮಾ ಮಾಹಿತಿ ನೀಡಿದ್ದಾರೆ.