More

    ಆಪ್ತ ಸಹಾಯಕನ ಬಂಧನ: ಸಚಿವ ಶ್ರೀರಾಮುಲು ಗರಂ- ಏನು ಹೇಳಿದ್ರು ಕೇಳಿ…

    ಬೆಂಗಳೂರು: ಸಚಿವರ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ವಸೂಲಿ ಮಾಡಿರುವ ಆರೋಪದ ಮೇಲೆ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಅವರ ಆಪ್ತ ಸಹಾಯಕ (ಪಿಎ)ನನ್ನು ಸಿಸಿಬಿ ಪೊಲೀಸರು ನಿನ್ನೆ ಬಂಧಿಸಿದ್ದು, ಇದಕ್ಕಾಗಿ ಶ್ರೀರಾಮುಲು ತುಂಬಾ ಅಸಮಾಧಾನ ಹೊರಹಾಕಿದ್ದಾರೆ.

    ತಮ್ಮ ಹೆಸರು ದುರ್ಬಳಕೆ ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಅವರು ಸಿಸಿಬಿಗೆ ದೂರು ನೀಡಿದ್ದರು. ಅವರ ದೂರಿನ್ವಯ ಎಫ್​ಐಆರ್​ ದಾಖಲಿಸಲಾಗಿತ್ತು. ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲೂ ಎಫ್​ಐಆರ್​ ದಾಖಲಾಗಿರುವ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ.

    ಈ ಕುರಿತು ಮುಖ್ಯಮಂತ್ರಿಗಳ ಜತೆ ಶ್ರೀರಾಮುಲು ಚರ್ಚೆ ಮಾಡಿದ್ದಾರೆ, ಯಾರೂ ಕೂಡ ಯಾರ ಹೆಸರನ್ನೂ ದುರ್ಬಳಕೆ ಮಾಡಿಕೊಳ್ಳಬಾರದು, ಅದು ಸರಿಯಲ್ಲ. ಆದರೂ ರಾಜು ವಿರುದ್ಧ ದೂರು ಕೊಡುವುದಕ್ಕೆ ಮುಂಚೆ ನನ್ನ ಬಳಿ ಮಾತನಾಡಬೇಕಿತ್ತು. ಈ ಕುರಿತು ಚರ್ಚೆ ಮಾಡಬೇಕಿತ್ತು. ಆದರೆ ಈಗ ಮಾಧ್ಯಮಗಳಲ್ಲಿ ನನ್ನ ಹೆಸರು ಬರುತ್ತಿದೆ. ನನಗೆ ಯಾವುದೇ ಮಾಹಿತಿ ನೀಡದೇ ರಾಜು ವಿರುದ್ಧ ದೂರು ನೀಡಿರುವುದು ಸರಿಯಲ್ಲ ಎಂದು ಆಪ್ತರ ಜತೆ ಹೇಳಿಕೊಂಡಿದ್ದಾರೆ.

    ರಾಜಣ್ಣ ನನಗೆ ಗೊತ್ತಿರುವ ಹುಡುಗ, ನನ್ನ ಬಳಿಯೇ ಕೆಲಸ ಮಾಡುತ್ತಿದ್ದ, ಹಾಗೆಂದು ಅಧಿಕೃತವಾಗಿ ನನ್ನ ಕಚೇರಿಯಲ್ಲಿ ಕೆಲಸಕ್ಕೆ ಇದ್ದವನಲ್ಲ, ನಿನ್ನೆ ಆತನನ್ನು ನನ್ನ ನಿವಾಸಕ್ಕೆ ಬಂದು ಪೊಲೀಸರು ಬಂಧಿಸುವವರೆಗೆ ನನಗೆ ಯಾವುದೇ ಮಾಹಿತಿಯಿರಲಿಲ್ಲ. ಮೊದಲೇ ಗೊತ್ತಿದ್ದರೆ ರಾಜುನನ್ನು ಕರೆದು ಕೇಳುತ್ತಿದ್ದೆ, ನನಗೆ ಮೊದಲೇ ಮಾಹಿತಿ ನೀಡಬೇಕಾಗಿದ್ದು, ಬಂಧನ ಆಗುವವರೆಗೆ ನನಗೆ ಈ ಬಗ್ಗೆ ಒಂಚೂರು ಮಾಹಿತಿ ಇರಲಿಲ್ಲ, ಈ ವಿಷಯದಲ್ಲಿ ತಪ್ಪು ಸಂವಹನ ನಡೆದಿದೆ, ತಮ್ಮ ಗಮನಕ್ಕೆ ತಾರದೆ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಗರಂ ಆದರು.

    ಇದರ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಪುತ್ರ ವಿಜಯೇಂದ್ರ ಬಳಿ ಮಾತನಾಡುತ್ತೇನೆ. ಕಾನೂನು ಪ್ರಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಿ ಎಂದು ಶ್ರೀರಾಮುಲು ಹೇಳಿದರು.

    ಏನಿದು ಪ್ರಕರಣ?: ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಅವರ ಆಪ್ತ ಸಹಾಯಕ ಅರೆಸ್ಟ್!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts