More

    ಅವಳೇನು ವಿಜಯ ಮಲ್ಯನಾ? ನೀರವ್​ ಮೋದಿನಾ? ಸಿಡಿ ಲೇಡಿ ಕೇಸ್​ನಲ್ಲಿ ಸಿದ್ದು ಗರಂ…

    ಬೆಂಗಳೂರು: ಸಿಡಿ ಪ್ರಕರಣದಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕದ ಮಾನ ಹರಾಜು ಆಗುತ್ತಿರುವುದಕ್ಕೆ ರಾಜ್ಯ ಸರ್ಕಾರ ಮತ್ತು ಪೊಲೀಸರ ವೈಫಲ್ಯವೇ ಕಾರಣ. ಸಿಡಿ ಮಾಧ್ಯಮದಲ್ಲಿ ಕಾಣಿಸಿಕೊಂಡು 26 ದಿನಗಳು ಕಳೆದರೂ ಸಂತ್ರಸ್ತೆ ಯುವತಿಯನ್ನು ಪೊಲೀಸರಿಗೆ ಪತ್ತೆಹಚ್ಚಲಿಕ್ಕಾಗದಿರುವುದು ನಾಚಿಕೆಗೇಡಿನ ಸಂಗತಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

    ದಿನಕ್ಕೊಂದು ತಿರುವು ಪಡೆದು ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿರುವ ಸಿಡಿ ಹಗರಣದ ತನಿಖೆ ತಾರ್ಕಿಕ ಅಂತ್ಯ ಕಾಣಬೇಕಾದರೆ ಸಂತ್ರಸ್ತ ಯುವತಿ ಅಜ್ಞಾತ ಸ್ಥಳದಿಂದ ಹೊರಬಂದು ಪೊಲೀಸರ ಮುಂದೆ ಹಾಜರಾಗಿ ಹೇಳಿಕೆ ನೀಡಬೇಕು. ಕಾನೂನುಬದ್ಧವಾದ ಅವಳ ಹಕ್ಕನ್ನು ಚಲಾಯಿಸದಂತೆ ತಡೆಯುತ್ತಿರುವವರು ಯಾರು? ಎಂದು ಪ್ರಶ್ನಿಸಿದ್ದಾರೆ.

    ಮಾಧ್ಯಮಗಳಲ್ಲಿ ಪ್ರಕಟ, ಪ್ರಸಾರವಾಗಿರುವ ಯುವತಿಯದ್ದೆನ್ನಲಾದ ಹೇಳಿಕೆಗಳನ್ನು ಗಮನಿಸಿದರೆ ಆಕೆಗೆ ರಾಜ್ಯ ಸರ್ಕಾರದ ಮೇಲಾಗಲಿ, ಪೊಲೀಸರ ಮೇಲಾಗಲಿ ನಂಬಿಕೆ ಇಲ್ಲ. ಪೊಲೀಸರು ತನ್ನ ವಿರುದ್ಧವೇ ಸಂಚು ಮಾಡುತ್ತಿದ್ದಾರೆಂಬ ಅರ್ಥದಲ್ಲಿ ಯುವತಿ ಮಾತನಾಡುತ್ತಿದ್ದಾಳೆ. ಗೃಹಸಚಿವ ಬೊಮ್ಮಾಯಿ ಈ ಬಗ್ಗೆ ಗಮನಹರಿಸಬೇಕು ಎಂದು ಸಲಹೆ ನೀಡಿದ್ದಾರೆ.

    ರಾಜ್ಯದ ಪೊಲೀಸ್ ಇಲಾಖೆಯೂ ಸೇರಿದಂತೆ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿರುವುದಕ್ಕೆ ಈ ಸಿಡಿ ಹಗರಣ ಸಾಕ್ಷಿ. ಸಾಮಾನ್ಯ ಕುಟುಂಬದಿಂದ ಬಂದಿರುವ ಯುವತಿಯನ್ನು ಇಷ್ಟು ದಿನಗಳ ನಂತರವೂ ಪತ್ತೆ ಹಚ್ಚಲಾಗಿಲ್ಲವೆಂದರೆ ಏನು ಅರ್ಥ? ಆಕೆಯೇನು ವಿಜಯಮಲ್ಯನೋ ಇಲ್ಲವೇ ನೀರವ್ ಮೋದಿಯೋ? ಎಂದು ಪ್ರಶ್ನಿಸಿದ್ದಾರೆ.

    ನಾಳೆ ನ್ಯಾಯಾಧೀಶರ​ ಮುಂದೆ ಸಿಡಿ ಲೇಡಿ? ‘ಕಳ್ಳರ’ ಎದೆಯಲ್ಲಿ ನಡುಕ- ಬಯಲಾಗತ್ತಾ ಸತ್ಯ?

    ಡಿಕೆಶಿಗಾಗಿಯೇ ಗೋವಾಕ್ಕೆ ಹೋಗಿದ್ದೆ ಎಂದ ಸಿಡಿ ಲೇಡಿ: ಯಾರ್ರಿ ಅವಳು ಅಂದ್ರು ‘ಬಂಡೆ’

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts