More

    ಮಾಜಿ ಸಿಎಂ ಸಿದ್ದರಾಮಯ್ಯ ಆರೋಗ್ಯ ಸ್ಥಿರ: ವೈದ್ಯರು ಹೇಳಿದ್ದೇನು?

    ಬೆಂಗಳೂರು: ಕರೊನಾ ಸೋಂಕಿನ ಹಿನ್ನೆಲೆಯಲ್ಲಿ ಇಲ್ಲಿಯ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಹೆಲ್ತ್‌ ಬುಲೆಟಿನ್‌ನಲ್ಲಿ ತಿಳಿಸಲಾಗಿದೆ.

    ಸಿದ್ಧರಾಮಯ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಮೇಲೆ ನಿಗಾ ಇಡಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಹೇಳಿದೆ. ಜ್ವರ ಇದ್ದ ಕಾರಣ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ರ್‍ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ವೇಳೆ ಕರೊನಾ ಸೋಂಕು ತಗುಲಿರುವುದು ಪತ್ತೆಯಾಗಿತ್ತು. ಪ್ರೋಟೋಕಾಲ್ ಪ್ರಕಾರ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದಿದ್ದಾರೆ ವೈದ್ಯರು.

    ಮೂತ್ರನಾಳದ ಸೋಂಕು ಮತ್ತು ಜ್ವರದಿಂದ ಬಳಲುತ್ತಿರುವ ಸಿದ್ದರಾಮಯ್ಯ ಅವರು ಅನಾರೋಗ್ಯಪೀಡಿತರಾಗಿದ್ದ ಹಿನ್ನೆಲೆಯಲ್ಲಿ ನಿನ್ನೆ ‌ತಡರಾತ್ರಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಪುತ್ರ ಡಾ.ಯತೀಂದ್ರ ಸಲಹೆ ಮೇರೆಗೆ ಅವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

    ಅಲ್ಲಿ ಅವರಿಗೆ ಕರೊನಾ ಪರೀಕ್ಷೆ ಮಾಡಲಾಗಿತ್ತು. ಇಂದು ಬೆಳಗ್ಗೆ ಅವರ ಕರೊನಾ ಟೆಸ್ಟ್ ಫಲಿತಾಂಶ ಸಿಕ್ಕಿತ್ತು, ಅದರಲ್ಲಿ ಕರೊನಾ ಪಾಸಿಟಿವ್‌ ಎಂದು ಹೇಳಲಾಗಿತ್ತು.

    ಈ ಕುರಿತು ಡಾ.ಯತೀಂದ್ರ ಟ್ವೀಟ್ ಮಾಡಿದ್ದು, “ನಿನ್ನೆ ಬೆಳಗ್ಗೆಯಿಂದ ತಂದೆಯವರಿಗೆ ಜ್ವರ ಬಂದಿದ್ದು ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷೆ ಮಾಡಿದಾಗ ಕು ತಗುಲಿರುವುದು ಧೃಢಪಟ್ಟಿದೆ. ಇತ್ತೀಚೆಗೆ ಅವರ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್‌ ಆಗಬೇಕೆಂದು ಕೇಳಿಕೊಳ್ಳುತ್ತೇನೆ” ಎಂದು ಮನವಿ ಮಾಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts