

ನವದೆಹಲಿ: ಕಾಂಗ್ರೆಸ್ ಮುಖವಾಣಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯಲ್ಲಿನ ಅಕ್ರಮ ಹಣ ವರ್ಗಾವಣೆಯಲ್ಲಿ ಸಿಲುಕಿರುವ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್ ಗಾಂಧಿಯವರಿಗೆ ಇದಾಗಲೇ ಜಾರಿ ನಿರ್ದೇಶನಾಲಯ ವಿಚಾರಣೆಗೆ ನೋಟಿಸ್ ಜಾರಿ ಮಾಡಿತ್ತು. ರಾಹುಲ್ ಗಾಂಧಿಯವರನ್ನು ಆರು ದಿನಗಳವರೆಗೆ ವಿಚಾರಣೆ ನಡೆಸಲಾಗಿದ್ದರೆ,ಕರೊನಾ ಕಾರಣದಿಂದ ಸೋನಿಯಾ ಗಾಂಧಿ ವಿಚಾರಣೆಗೆ ಹಾಜರು ಆಗಿರಲಿಲ್ಲ.
ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದ್ದ ಮಾರನೆಯ ದಿನವೇ ಸೋನಿಯಾ ಅವರಿಗೆ ಕರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ನಿರ್ದೇಶನಾಲಯವು ಅವರ ಹಾಜರಿಗೆ ಮತ್ತೊಮ್ಮೆ ಸೂಚಿಸಿದ ಮರುದಿನ ಕರೊನಾ ಸೋಂಕು ಹೆಚ್ಚಿ ಸೋನಿಯಾ ಆಸ್ಪತ್ರೆ ಸೇರಿದ್ದರು.
ಕಳೆದ ಸೋಮವಾರ ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಇದೇ ಗುರುವಾರ (ಜೂನ್ 23) ಅವರ ಖುದ್ದು ಹಾಜರಿಗೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದೆ.
ಆದರೆ ಇದೀಗ ಸೋನಿಯಾ ಗಾಂಧಿ ವಿಚಾರಣೆಗೆ ಹಾಜರಾಗಲು ಇನ್ನಷ್ಟು ಸಮಯವನ್ನು ಕೋರಿದ್ದಾರೆ. ತಮಗೆ ವೈದ್ಯರು ವಿಶ್ರಾಂತಿ ಸೂಚಿಸಿದ್ದರಿಂದ, ವಿಚಾರಣೆ ಹಾಜರಾಗಲು ಇನ್ನೂ ಕಾಲಾವಕಾಶ ಬೇಕು ಎಂದು ಅವರು ಜಾರಿ ನಿರ್ದೇಶನಾಲಯದೊಂದಿಗೆ ವಿನಂತಿ ಮಾಡಿಕೊಂಡಿದ್ದಾರೆ.
ಈ ಕುರಿತು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಟ್ವೀಟ್ ಮಾಡಿದದು, ಸೋನಿಯಾಗಾಂಧಿವರಿಗೆ ವೈದ್ಯರು ಬೆಡ್ರೆಸ್ಟ್ ಹೇಳಿರುವ ಹಿನ್ನೆಲೆಯಲ್ಲಿ ಖುದ್ದು ಹಾಜರಿಯಿಂದ ಸದ್ಯ ವಿನಾಯಿತಿ ಕೋರಿ ಪತ್ರ ಬರೆದಿದ್ದಾರೆ ಎಂದಿದ್ದಾರೆ.
ಕೋವಿಡ್ ಸೋಂಕಿನ ಬಳಿಕ ಸೋನಿಯಾ ಅವರ ಮೂಗಿನಲ್ಲಿ ವಿಪರೀತ ರಕ್ತಸ್ರಾವ ಉಂಟಾದ ಕಾರಣ ಜೂನ್ 12ರಂದು ಹೊಸದಿಲ್ಲಿಯ ಶ್ರೀ ಗಂಗಾ ರಾಮ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ಸಂದರ್ಭದಲ್ಲಿ ಅವರಲ್ಲಿ ಲೋವರ್ ರೆಸ್ಪಿರೇಟರಿ ಟ್ರ್ಯಾಕ್ಟ್‌ನಲ್ಲಿ ಶಿಲೀಂದ್ರ ಸೋಂಕು ಕೂಡ ಪತ್ತೆಯಾಗಿತ್ತು ಎನ್ನಲಾಗಿದೆ.https://www.vijayavani.net/s-rahul-gandhi-ed-enquiry-for-sixth-day/https://www.vijayavani.net/s-rahul-gandhi-ed-enquiry-for-sixth-day/