More

    ಸೆಪ್ಟೆಂಬರ್‌ನಲ್ಲಿ ಶಾಲೆ ಶುರುವಾಗತ್ತಾ? ಸಚಿವ ಸುರೇಶ್‌ಕುಮಾರ್‌ ಏನು ಹೇಳಿದ್ದಾರೆ ಕೇಳಿ…

    ಮಂಡ್ಯ: ಕರೊನಾ ವೈರಸ್‌ ಬಿಕ್ಕಟ್ಟಿನ ನಡುವೆಯೇ ಕೆಲವು ರಾಜ್ಯಗಳು ಸೆಪ್ಟೆಂಬರ್‌ನಲ್ಲಿ ಶಾಲೆಯನ್ನು ಶುರು ಮಾಡಲು ಚಿಂತನೆ ನಡೆಸಿವೆ. ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಕರ್ನಾಟಕದ ಸ್ಥಿತಿ ಏನು? ಶಾಲೆ ಸೆಪ್ಟೆಂಬರ್‌ನಲ್ಲಿ ಶುರುವಾಗುತ್ತದೆಯೇ ಎಂದು ಪಾಲಕರು ಹಾಗೂ ವಿದ್ಯಾರ್ಥಿಗಳಲ್ಲಿ ಹಲವು ಪ್ರಶ್ನೆ ಕಾಡತೊಡಗಿದೆ.

    ಇದಕ್ಕೆ ಉತ್ತರಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರು, ಯಾವುದೇ ಕಾರಣಕ್ಕೂ ಸೆಪ್ಟೆಂಬರ್​ನಿಂದ ಶಾಲೆಗಳನ್ನು ಪ್ರಾರಂಭಿಸುವುದಿಲ್ಲ ಎಂದಿದ್ದಾರೆ.

    ಮಂಡ್ಯಕ್ಕೆ ಭೇಟಿ ನೀಡಿದ್ದ ಸಚಿವರು ಶಾಲೆ ಆರಂಭದ ಕುರಿತು ಪತ್ರಕರ್ತರು ಕೇಳಿರುವ ಪ್ರಶ್ನೆಗೆ ಉತ್ತರಿಸುತ್ತಾ, ‘ಸುರೇಶ್ ಕುಮಾರ್ ಶಾಲೆ ಪ್ರಾರಂಭ ಮಾಡಲು ತುದಿಗಾಲಿನಲ್ಲಿ ನಿಂತಿದ್ದಾರೆ ಎಂಬ ಬಿರುದು ಕೊಟ್ಟಿದ್ದಾರೆ. ಖಂಡಿತ ಯಾವುದೇ ಕಾರಣಕ್ಕೂ ಸೆಪ್ಟೆಂಬರ್​ನಿಂದ ಶಾಲೆಗಳನ್ನು ಪ್ರಾರಂಭಿಸುವುದಿಲ್ಲ’ ಎಂದಿದ್ದಾರೆ.

    ಈಗ ನಮ್ಮ ಮುಂದೆ ದೊಡ್ಡ ಸವಾಲು ಇದೆ. ಮುಂದಿನ ಶೈಕ್ಷಣಿಕ ದಿನಗಳು ಹೇಗೆ ಎಂದು ಯೋಚನೆ ಮಾಡುವಂತಾಗಿದೆ. ಆದರೆ ಕರೊನಾ ಹಾವಳಿ ಕ್ಷಣಕ್ಷಣಕ್ಕೂ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸದ್ಯ ಶಾಲೆ ಶುರುವಿನ ಬಗ್ಗೆ ಯಾವುದೇ ಯೋಚನೆ ಮಾಡಲಿಲ್ಲ ಎಂದಿದ್ದಾರೆ.

    ಮಕ್ಕಳ ಆರೋಗ್ಯ ನನಗೆ ಬಹಳ ಮುಖ್ಯ. ಅವರ ಸುರಕ್ಷತೆಗೆ ಆದ್ಯತೆ ನೀಡಬೇಕು. ನಮ್ಮ ಮಕ್ಕಳ ಕಲಿಕೆ ಕುರಿತಂತೆ, ಅವರಿಗೆ ಕಲಿಕೆಯನ್ನು ಮುಂದುವರಿಸಬಹುದು ಎಂಬುದಕ್ಕೆ ಈಗಾಗಲೇ ನಮ್ಮ ರಾಜ್ಯತದಲ್ಲಿ ವಿದ್ಯಾಗಮನ ಎಂಬ ಯೋಜನೆಯನ್ನು ತರಲಾಗಿದೆ. ಈ ವಿದ್ಯಾಗಮನ ಯೋಜನೆ ಇಡೀ ರಾಷ್ಟ್ರವೇ ನೋಡುವಂಥ ಅತ್ಯುತ್ತಮ ಯೋಜನೆ ಎಂದು ಹೇಳಿದರು.

    ಇದನ್ನೂ ಓದಿ: ಮೃತರ ಅಂಗಾಂಗ ದಾನ ಇನ್ನು ಕಡ್ಡಾಯ: ಶೀಘ್ರ ಮಸೂದೆ ಮಂಡನೆ

    ಟಿವಿಯಲ್ಲಿ ಸೇತುಬಂಧ ಕಾರ್ಯಕ್ರಮ ಮಾಡ್ತಿದ್ದೇವೆ. ಶಿಕ್ಷಣ ಇಲಾಖೆಯಿಂದ ಎರಡು ಚಾನಲ್​ಗಳನ್ನು ಪ್ರಾರಂಭಿಸುತ್ತಿದ್ದೇವೆ. ಎಲ್ಲಾ ತರಗತಿಗಳಿಗೆ ಪಾಠ ಮಾಡಲು ಸಿದ್ದತೆ ನಡೆದಿದೆ, ಪಠ್ಯಕ್ರಮ ಕೂಡ ಸಿದ್ಧವಾಗಿದೆ. ಸಮಾಜಕ್ಕೆ ಭರವಸೆ ಕೊಡುವ ಕಾರ್ಯವನ್ನ ಶಿಕ್ಷಣ ಇಲಾಖೆ ಮಾಡುತ್ತಿದೆ ಎಂದು ಸಚಿವರು ಹೇಳಿದರು.

    ಮಂಡ್ಯ ಜಿಲ್ಲೆಯ ಮಳವಳ್ಳಿ ಸೇರಿದಂತೆ ಕೆಲವು ಕಡೆಗಳಲ್ಲಿ ಊರಿನ ಪಡಸಾಲೆಗಳಲ್ಲಿ ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದಾರೆ. ಶಿಕ್ಷಕರು ಮಕ್ಕಳು ಇರುವ ಕಡೆ ಹೋಗಿ ಮಕ್ಕಳ ಕಲಿಕೆಗೆ ಪ್ರೋತ್ಸಾಹ ಕೊಟ್ಟು ಕಲಿಸುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆ ಎಂದರು.

    ಸಂಸ್ಕರಿಸಿಟ್ಟ ಮಾಂಸ ಕೊಳ್ಳುವವರಿಗೆ ಚೀನಾ ನೀಡಿದೆ ಎಚ್ಚರಿಕೆಯ ಗಂಟೆ!

    ಮಚ್ಚು ಹಿಡಿದು ಚಿನ್ನದಂಗಡಿಗೆ ನುಗ್ಗಿದವನ ಚಚ್ಚಿದಳು ಚಿಕ್ಕಮಗಳೂರು ಮಹಿಳೆ!

    ನಾಯಿಗಳು ಕಚ್ಚಿ ತಿಂದ ಕರೊನಾ ಸೋಂಕಿತನ ಶವ!

    ಪಾಕ್‌ಗೆ ಬಿಗ್‌ ಷಾಕ್‌: ಸಾಲವೂ ಬಂದ್‌, ತೈಲವೂ ಬಂದ್‌ ಎಂದ ಸೌದಿ ಅರೇಬಿಯಾ!

    ಫ್ರಿಜ್‌ ಟ್ರೇ ಬಳಸಿ ಆನ್‌ಲೈನ್‌ ಕ್ಲಾಸ್‌: ಶಿಕ್ಷಕಿಯ ಪ್ಲ್ಯಾನ್‌ಗೆ ಅಪಾರ ಮೆಚ್ಚುಗೆ

    ದಫನ್‌ ಆಗಿದ್ದವ ರಾತ್ರಿ ಹೆಂಡತಿಗೆ ಪ್ರತ್ಯಕ್ಷನಾಗಿ ನಾನೇ ನಿನ್ನ ಗಂಡ ಎಂದ!

    ಸರ್ಕಾರಿ ಆಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ ಪತ್ನಿ ಡೆಲಿವರಿ: ಶ್ಲಾಘನೆಗಳ ಮಹಾಪೂರ

    ಹೋಟೆಲ್‌ನಲ್ಲಿ ರಾತ್ರಿ ಕಳೆದ ಪ್ರೇಮಿಗಳು ಮಾರನೆಯ ದಿನ ಶವವಾದರು!

    ಅತ್ಯಂತ ಕ್ರೂರವಾಗಿ ಲಾಕಪ್‌ ಡೆತ್‌ ಮಾಡಿದ್ದ ಆರೋಪಿ ಪೊಲೀಸ್‌ ಕರೊನಾಕ್ಕೆ ಬಲಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts