More

    ಶಾಲಾ-ಕಾಲೇಜುಗಳ ಪ್ರಾರಂಭ ಕುರಿತು ಫೇಸ್​ಬುಕ್​ನಲ್ಲಿ ಅಭಿಪ್ರಾಯ ತಿಳಿಸಿದ ಶಿಕ್ಷಣ ಸಚಿವರು

    ಬೆಂಗಳೂರು: ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ತಿಳಿಸಿದರು.

    ತಮ್ಮ ಫೇಸ್​ಬುಕ್​ ಪೇಜ್​ನಲ್ಲಿ ಬರೆದುಕೊಂಡಿರುವ ಸಚಿವರು, ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆಯು ಸರ್ಕಾರದ ಮುಂದೆ ಇಲ್ಲ ಎಂದಿದ್ದಾರೆ.

    ಇದನ್ನೂ ಓದಿ: ಮಂಗಳ ಗ್ರಹದಲ್ಲಿಯೂ ಕಟ್ಟಬಹುದು ಮನೆ! ಪತ್ತೆಯಾಗಿವೆ ಮೂರು ಸರೋವರ

    ಈ ಕುರಿತು ಶಾಸಕರ ಮತ್ತು ಸಂಸದರ ಹಾಗೂ ಇತರೆ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಆಹ್ವಾನಿಸುತ್ತಿದ್ದೇನೆ. ಇದರ ಜೊತೆಗೆ ಶಿಕ್ಷಕ ಸಂಘಟನೆಗಳೊಂದಿಗೆ ಹಾಗೂ ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸುತ್ತಿದ್ದೇನೆಂದು ಹೇಳಿದರು.

    ನಾನೀಗ ಸದ್ಯಕ್ಕೆ ಬೀದರ್ ಜಿಲ್ಲೆಯ ಪ್ರವಾಸದಲ್ಲಿದ್ದು, ಬೆಂಗಳೂರಿಗೆ ಬಂದ ನಂತರ ಈ ಕುರಿತು ಇನ್ನಷ್ಟು ವಿವರವಾಗಿ ವಾಸ್ತವಾಂಶವನ್ನು ತಿಳಿಸುತ್ತೇನೆ. ಮತ್ತೊಮ್ಮೆ ಸ್ಪಷ್ಟೀಕರಣ ನೀಡುವುದೆಂದರೆ ನಮ್ಮ ರಾಜ್ಯದ ಶಾಲೆ-ಕಾಲೇಜು ಪ್ರಾರಂಭ ಮಾಡುವ ದಿನಾಂಕದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದರು.

    ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ. ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆಯು ಸರ್ಕಾರದ ಮುಂದೆ…

    Posted by Suresh Kumar S on Monday, September 28, 2020

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts