More

    ನಿಯೋಜಿತ ಶಿಕ್ಷಕರ ವರ್ಗಾವಣೆ ಸದ್ಯಕ್ಕಿಲ್ಲ: ಸುರೇಶ್‌ಕುಮಾರ್

    ಬೆಂಗಳೂರು: ರಾಜ್ಯದ ವಿವಿಧ ಸರ್ಕಾರಿ ಶಾಲೆಗಳಲ್ಲಿ ನಿಯೋಜನೆ ಮೇರೆಗೆ ಕಾರ್ಯ ನಿರ್ವಹಿಸುತ್ತಿರುವ ಮತ್ತು ಕಡ್ಡಾಯ ವರ್ಗಾವಣೆ ಹೊಂದಿದ ಶಿಕ್ಷಕರು ಮುಂದಿನ ಆದೇಶದವರೆಗೂ ಈಗ ಕಾರ್ಯ ನಿರ್ವಹಿಸುತ್ತಿರುವಲ್ಲೇ ಸೇವೆ ಮುಂದುವರಿಸಬೇಕಿದೆ.

    ಇದನ್ನೂ ಓದಿ: ಗುಜರಾತ್‌ನಿಂದ ಬಿಹಾರಕ್ಕೆ ಹೊರಟಿದ್ದ ರೈಲು ತಲುಪಿದ್ದು ಕರ್ನಾಟಕಕ್ಕೆ!

    ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ಕುರಿತು ಮಂಗಳವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಪತ್ರ ಬರೆದು ಆದೇಶ ನೀಡಿದ್ದಾರೆ.

    ಶಿಕ್ಷಕರ ಹೊಸ ವರ್ಗಾವಣಾ ನಿಯಂತ್ರಣ ಕಾಯ್ದೆಯ ನಿಯಮಗಳು ರೂಪುಗೊಳ್ಳುತ್ತಿದ್ದು, ಈ ನಿಯಮಗಳ ಆಧಾರದಲ್ಲಿ ಪ್ರಸಕ್ತ ಸಾಲಿನ ಶಿಕ್ಷಕರ ವರ್ಗಾವಣಾ ವೇಳಾಪಟ್ಟಿ ಪ್ರಕಟಿಸಬೇಕಿದೆ.

    ಇದನ್ನೂ ಓದಿ: ಪತ್ನಿಗೆ ಹಾವು ಕಚ್ಚಿಸಿ ಕೊಲೆಗೈದ ಪ್ರಕರಣ: ಆರೋಪಿ ಸಿಕ್ಕಿಬೀಳಲು ಆತನ ನಡೆಯೇ ಕಾರಣವಾಯ್ತು!

    ಹೀಗಾಗಿ ಪ್ರಸ್ತುತ ರಾಜ್ಯದ ವಿವಿಧ ಸರ್ಕಾರಿ ಶಾಲೆಗಳಲ್ಲಿ ನಿಯೋಜನೆ ಮೇರೆಗೆ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರು, ಈ ಶೈಕ್ಷಣಿಕ ಸಾಲಿನಲ್ಲಿ ಕಡ್ಡಾಯವಾಗಿ ವರ್ಗಾವಣೆಗೊಳಗಾದ ಮತ್ತು ವರ್ಗಾವಣೆ ಹಿನ್ನೆಲೆಯಲ್ಲಿ ಸೇವೆಯಿಂದ ಬಿಡುಗಡೆ ಹೊಂದದಿರುವ ಶಿಕ್ಷಕರನ್ನು ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳದಲ್ಲೇ ಮುಂದಿನ ಆದೇಶದವರೆಗೆ ಮುಂದುವರಿಸುವಂತೆ ಸಚಿವರು ಸೂಚಿಸಿದ್ದಾರೆ.

    ತನ್ನ ದೇಶದ ನರಿಬುದ್ಧಿಯ ವಿರುದ್ಧವೇ ತಿರುಗಿಬಿದ್ದ ಚೀನಾ ಜನತೆ…!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts